ತುಮಕೂರು:ತ್ರಿವಿಧ ದಾಸೋಹಿ, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 4ನೇ ಪುಣ್ಯ ಸಂಸ್ಮರಣೋತ್ಸವ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿದೆ. ಕಳೆದ ಎರಡು ವರ್ಷಗಳಿಂದ ಸರಳವಾಗಿ ಶ್ರೀಗಳ ಪುಣ್ಯಸ್ಮರಣೆ ಆಚರಿಸಿದ್ದು, ಈ ಬಾರಿ ದೊಡ್ಡಮಟ್ಟದಲ್ಲಿ ಆಯೋಜಿಸಿರುವ ಸಮಾರಂಭಕ್ಕೆ 5 ಲಕ್ಷಕ್ಕೂ ಹೆಚ್ಚು ಜನರು ಸಾಕ್ಷಿಯಾಗಲಿದ್ದಾರೆ.ಶ್ರೀಗಳ ಗದ್ದುಗೆಯನ್ನು ತರೇಹವಾರಿ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ.
ಶ್ರೀಮಠದ ಆವರಣದಲ್ಲಿ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಪುಣ್ಯ ಸಂಸ್ಮರಣೋತ್ಸವ ನಡೆಯಲಿದ್ದು, 10 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಉದ್ಘಾಟಿಸುವರು. ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳು ನೇತೃತ್ವ ವಹಿಸುವರು. ಬೆಂಗಳೂರು ಬೇಲಿಮಠದ ಶ್ರೀ ಶಿವರುದ್ರಸ್ವಾಮೀಜಿ ಸಾನ್ನಿಧ್ಯ ವಹಿಸುವರು.
ಬೆಳಗ್ಗೆ 5.30ರಿಂದ ಮಹಾರುದ್ರಾಭಿಷೇಕ, ರಾಜೋಪಚಾರ, ಬಿಲ್ವಾರ್ಚನೆ ಸೇರಿ ಪೂಜಾ ಕೈಂಕರ್ಯಗಳು ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳ ನೇತೃತ್ವದಲ್ಲಿ ಹರಗರು ಚರಮೂತಿರ್ಗಳ ಸಮ್ಮುಖದಲ್ಲಿ ನಡೆಯಿತು. ಪುಣ್ಯಸ್ಮರಣೆಗೆ ಬರುವ ಭಕ್ತರಿಗೆ ಶ್ರೀಗಳ ಗದ್ದುಗೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
7 ಕಡೆ ದಾಸೋಹ: ಶ್ರೀಮಠದ ಆವರಣದಲ್ಲಿ 7 ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 7 ರಿಂದ 11 ರವರೆಗೆ ಉಪಹಾರ, 11.30ಕ್ಕೆ ಆರಂಭವಾಗಲಿರುವ ದಾಸೋಹವು ರಾತ್ರಿ 11ರವರೆಗೆ ನಿರಂತರವಾಗಿ ನಡೆಯಲಿದೆ. ಮಠದ ವಿದ್ಯಾರ್ಥಿಗಳು, ಶಿಕ್ಷಕರು ಇದರ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದಾರೆ. ಬೂಂದಿ, ಕೀರು, ಚಿತ್ರಾನ್ನ, ಪಲ್ಯ, ಹೆಸರುಬೇಳೆ ಪಲ್ಯ, ಅನ್ನ, ಸಾಂಬಾರು, ಮಜ್ಜಿಗೆ ಮಧ್ಯಾಹ್ನದ ಪ್ರಸಾದಕ್ಕೆ ನೀಡಲಾಗುವುದು.

ಸಿಎಂ ಬೊಮ್ಮಾಯಿ, ಬಿ.ಎಲ್​.ಸಂತೋಷ್​ ಭಾಗಿ:ಸಿದ್ಧಗಂಗಾ ಮಠಾಧ್ಯ ಶ್ರೀಸಿದ್ದಲಿಂಗ ಸ್ವಾಮೀಜಿ ಅವರು ಡಾ.ಶಿವಕುಮಾರ ಸ್ವಾಮೀಜಿಗಳ 4ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದು, ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಬಿಜೆಪಿ ರಾಷ್ಟ್ರೀಯ ಸಂಟನಾ ಕಾರ್ಯದರ್ಶಿ ಬಿ.ಎಲ್​.ಸಂತೋಷ್​, ಸಚಿವರಾದ ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್​, ಎಸ್​.ಟಿ.ಸೋಮಶೇಖರ್​ ಮತ್ತಿತರರು ಉಪಸ್ಥಿತರಿರುವರು.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್​ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನ: ಎಚ್​ಡಿಕೆ ಸಂತಾಪ ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
