ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯಾ ಅವರ ಅಂತ್ಯಸಂಸ್ಕಾರ ಪ್ರಕ್ರಿಯೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ಬೆಂಗಳೂರಿನ ಅಬ್ಬಿಗೆರೆ ಫಾರ್ಮ್​ಹೌಸ್​ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತ್ಯಸಂಸ್ಕಾರದ ಮುನ್ನ ನಡೆಯುವ ವಿಧಿ-ವಿಧಾನಗಳು ಆರಂಭಗೊಂಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬಸ್ಥರು ಈಗಾಗಲೇ ಪಾದಪೂಜೆ ನೆರವೇರಿಸಿದ್ದಾರೆ.
ಒಟ್ಟು ಪ್ರಕ್ರಿಯೆ ಸುಮಾರು ಒಂದು ಗಂಟೆಯ ಕಾಲ ನಡೆಯಲಿದೆ. ವೀರರುದ್ರಮುನಿ ಶಿವಾಚಾರ್ಯ ಅವರ ನೇತೃತ್ವದಲ್ಲಿ ಅಂತ್ಯಕ್ರಿಯೆ ವಿಧಿ-ವಿಧಾನ ನಡೆಯುತ್ತದೆ ಎಂದು ನವೀನ್​ ಶಾಸ್ತ್ರಿ ಎಂಬವರು ತಿಳಿಸಿದ್ದಾರೆ.
ಡಾ.ಸೌಂದರ್ಯ ಅವರ ತಂದೆ ವಿರೂಪಾಕ್ಷಪ್ಪ ಅವರು ಹುಬ್ಬಳ್ಳಿಯ ನಿವಾಸದಿಂದ ಹೊರಟಿದ್ದು, ಕೆಲವೇ ಕ್ಷಣಗಳಲ್ಲಿ ಬಂದು ತಲುಪಲಿದ್ದಾರೆ. ಅವರ ಬರುವಿಕೆಗಾಗಿ ಕುಟುಂಬ ಕಾಯುತ್ತಿದ್ದು, ಅವರು ಆಗಮಿಸುತ್ತಿದ್ದಂತೆ ಎಲ್ಲ ಪ್ರಕ್ರಿಯೆಗಳು ಚುರುಕಾಗಿ ನಡೆಯಲಿವೆ.
ಬಿಎಸ್​ವೈ ಮೊಮ್ಮಗಳ ಆತ್ಮಹತ್ಯೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವರಿಂದ ಸಾಂತ್ವನ
ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 4 =
Remember me
