ತುಮಕೂರು:ಖಾಸಗಿ ಆಸ್ಪತ್ರೆಗಳಲ್ಲಿ ಕರೊನಾ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ದೂರು ನೀಡಿ. ಈ ಬಗ್ಗೆ ತನಿಖೆ ನಡೆಸಿ ತಪ್ಪಾಗಿದ್ದರೆ ಕ್ರಮಕೈಗೊಳ್ಳಲಾಗುವುದು ಎಂದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರೊನಾ ಸಾವಿನ ಪ್ರಮಾಣದಲ್ಲಿ ವಿಪಕ್ಷ ಹೇಳುತ್ತಿರುವ ಅಂಕಿಅಂಶದ ವಿರುದ್ಧ ಕಿಡಿಕಾರಿದರು.
ನಗರ ಹೊರವಲಯದಲ್ಲಿ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ನೂತನ ಕೋವಿಡ್ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕರೊನಾ ಚಿಕಿತ್ಸೆಗೆ ಸಂಬಂಧಿಸಿದಂತೆ ಈಗಾಗಲೇ ದರ ನಿಗದಿ ಮಾಡಿದ್ದೇವೆ. ಇದನ್ನು ಉಲ್ಲಂಘಿಸಿದರೆ ಕ್ರಮಕೈಗೊಳ್ಳಲಾಗುವುದು. ಕರೊನಾ ಸೋಂಕಿನ ಸಮಸ್ಯೆಯ ಜತೆ ಕೆಲವು ರೋಗಿಗಳಿಗೆ ಬಹು ಅಂಗಾಂಗ ವೈಫಲ್ಯವೂ ಆಗಿರುತ್ತದೆ. ಆಗ ಅದಕ್ಕೆ ಪ್ರತ್ಯೇಕ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದು ತಿಳಿಸಿದರು.ಇದನ್ನೂ ಓದಿರಿ ಇದನ್ನೂ ಓದಿರಿಪಕ್ಷಾಂತರ ಗುಮ್ಮ ಮತ್ತೆ ಬಂತು! ಜೆಡಿಎಸ್​ ತೊರೆದು ‘ಕೈ’ ಹಿಡಿಯಲು ಕ್ಷಣಗಣನೆ
ಸರ್ಕಾರದ ನಿರ್ದೇಶನ ಹಾಗೂ ಮಾರ್ಗಸೂಚಿಗಳ ಪ್ರಕಾರವೇ ನಡೆದುಕೊಳ್ಳಬೇಕು. ಕರೊನಾ ಸಂದರ್ಭದಲ್ಲಿ ಎಲ್ಲರೂ ಮಾನವೀಯತೆಯಿಂದ ನಡೆದುಕೊಳ್ಳಬೇಕು ಎಂದು ಸುಧಾಕರ್ ಹೇಳಿದರು.
ರಾಜ್ಯದಲ್ಲಿ 5 ಲಕ್ಷ ಮಂದಿಗೆ ಸೋಂಕು ತಗುಲಿದ್ದು, ಇವರಲ್ಲಿ 4 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟಾರೆ ಸಾವಿನ ಪ್ರಮಾಣ ಶೇ. 1.64 ಇದ್ದರೆ, ರಾಜ್ಯದಲ್ಲಿ ಶೇ. 1.56 ಇದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ವಿರೋಧ ಪಕ್ಷದವರು ಸಾವಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚುತ್ತಿದೆ ಎಂದು ಸುಮ್ಮನೆ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಹೇಳಿಕೆ ಕೊಡುವ ಮುನ್ನ ಅಂಕಿ ಅಂಶಗಳನ್ನು ನೋಡಲಿ ಎಂದು ಚಾಟಿ ಬೀಸೀದರು. ಇದೇ ವೇಳೆ ಡಾ.ಜಿ. ಪರಮೇಶ್ವರ್​ ಇದ್ದರು.
ಜಿಲ್ಲಾಡಳಿತದ ವಿರುದ್ಧ ಶಾಸಕಿ ಆಕ್ರೋಶ, ಏಕಾಂಗಿಯಾಗಿ ಹೋರಾಟ!

ಪಕ್ಷಾಂತರ ಗುಮ್ಮ ಮತ್ತೆ ಬಂತು! ಜೆಡಿಎಸ್​ ತೊರೆದು ‘ಕೈ’ ಹಿಡಿಯಲು ಕ್ಷಣಗಣನೆ

‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
