ಬೆಂಗಳೂರು:  ಕೋವಿಡ್ ಲಸಿಕೆ 2021ರ ಆರಂಭದಲ್ಲೇ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್​ಫರ್ಡ್ ವಿಶ್ವವಿದ್ಯಾಲಯ ಸಹಯೋಗದಲ್ಲಿ ಪ್ರಯೋಗ ಮಾಡಲಾಗುತ್ತಿದೆ. ಮೈಸೂರಿನ ಜೆಎಸ್ಎಸ್ ಸಂಸ್ಥೆ ಜೊತೆಗೂ ಒಪ್ಪಂದವಾಗಿದೆ. 56 ದಿನಗಳ ಹಿಂದಷ್ಟೇ ಒಂದನೇ ಹಂತದ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇನ್ನು 2 ಹಾಗೂ 3 ನೇ ಹಂತದಲ್ಲಿ ದೇಶದ 1,600 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. ಇನ್ನಷ್ಟು ಹೆಚ್ಚು ಜನರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಬೇಕು ಎಂದು ಸಂಸ್ಥೆಯನ್ನು ಕೋರಲಾಗಿದೆ. ಜತೆಗೆ ರಾಜ್ಯದಲ್ಲಿ ಲಸಿಕೆ ವಿತರಣೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. 100 ಕೋಟಿ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ ಎಂದು ಸಂಸ್ಥೆಯವರು ತಿಳಿಸಿದ್ದಾಗಿ ಸಚಿವರು ವಿವರಿಸಿದರು.
ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದೊಂದಿಗೆ ಆರೋಗ್ಯ ತಜ್ಞರು, ತಾಂತ್ರಿಕ ಪರಿಣತರು, ಪೂರೈಕೆದಾರರನ್ನು ಒಳಗೊಂಡಂತೆ ತಾಂತ್ರಿಕ ಸಮಿತಿ ರಚಿಸಿದ್ದು, ಲಸಿಕೆಯ ಪೂರೈಕೆ, ಸಂಗ್ರಹಣೆ, ವಿತರಣೆ ಕುರಿತು ಸಮಿತಿ ಸಲಹೆ ನೀಡಲಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಯೋವೃದ್ಧರು, ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ. ಲಸಿಕೆಯ ದರದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಮ್ಮ ಸರ್ಕಾರ ಕೋವಿಡ್ ಪರೀಕ್ಷೆ, ಚಿಕಿತ್ಸೆ ‌ಮೊದಲಾದ ವೆಚ್ಚಗಳನ್ನು ಭರಿಸಿದೆ.‌ ಅದೇ ರೀತಿ‌‌ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಬದ್ಧ ಎಂದು ತಿಳಿಸಿದರು.
ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆ್ಯಂಟಿಬಾಡಿ ಉತ್ಪಾದನೆ ಆಗಿದೆ. 1 ನೇ ಹಂತದಲ್ಲಿ ಕೊರೊನಾ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3 ನೇ ಹಂತಗಳಲ್ಲಿ ಕರೊನಾ ಸೋಂಕು ಬಂದಿರುವವರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು.
ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕರೊನಾ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡುತ್ತಿದ್ದಾರೆ. ಯಾವುದೇ ಅಂಕಿ- ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಕರ್ನಾಟಕ ಸರ್ಕಾರ ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ. ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕರೋನಾ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಥರಸ್​ ಕೇಸ್​: ಅಲಹಾಬಾದ್ ಹೈಕೋರ್ಟ್​ ನಿಗಾದಲ್ಲಿ ನಡೆಯಲಿದೆ ಸಿಬಿಐ ತನಿಖೆ ಎಂದ ಸುಪ್ರೀಂ ಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
