ಬೆಂಗಳೂರು:ಸಂಪುಟ ಪುನರ್ ರಚನೆಗೂ ಮುನ್ನವೇ ಬಿ.ಎಸ್​. ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇದರ ವಿರುದ್ಧ ಸಚಿವ ಬಿ.ಶ್ರೀರಾಮುಲು ಸೇರಿದಂತೆ ಉತ್ತರ ಕರ್ನಾಟಕದ ಹಲವು ಶಾಸಕರು ಆಕ್ರೋಶ ಹೊರಹಾಕಿದ್ದಾರೆ.
ಶ್ರೀರಾಮುಲು ಬಳಿಯಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್​ ಅವರ ಕೈಗಿಡಲು ಸಿಎಂ ನಿರ್ಧರಿಸಿದ್ದಾರೆ. ಈ ಬಗ್ಗೆ ದಿಗ್ವಿಜಯ ನ್ಯೂಸ್​ಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಇಂತಹ ಸಮಯದಲ್ಲಿ ಖಾತೆ ಬದಲಾವಣೆ ಮಾಡಿದ್ದು ಸರಿಯಲ್ಲ. ಸಂಪುಟ ಪುನರ್ ರಚನೆ ಸಮಯದಲ್ಲಿ ಖಾತೆ ಬದಲಾವಣೆ ಮಾಡಿದ್ದರೆ ಚೆನ್ನಾಗಿತ್ತು. ಈಗ ದಿಢೀರ್ ಬದಲಾವಣೆ ಮಾಡಿದರೆ ನಾನು ಏನೂ ಕೆಲಸ ಮಾಡಿಲ್ಲ ಎಂಬ ಸಂದೇಶ ಹೋಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
‘ಕರೋನಾ ಸಮಯದಲ್ಲಿ ವಾರಿಯರ್ ಆಗಿ ರಾಜ್ಯಾದ್ಯಂತ ಟೂರ್ ಹೊಡೆದ್ರಿ.. ಕರೋನಾ ಸೋಂಕು ತಗುಲಿದ್ದಾಗ ಸ್ವತಃ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ್ರಿ.. ಈಗ ಏಕಾಏಕಿ ನಿಮ್ಮ ಖಾತೆಯನ್ನು ಏಕೆ ಬದಲಾವಣೆ ಮಾಡಲಾಗುತ್ತಿದೆ? ಎಂದು ಉತ್ತರ ಕರ್ನಾಟಕ ಭಾಗದ ಹಲವು ಶಾಸಕರು ಶ್ರೀರಾಮುಲು ಅವರನ್ನು ಕೇಳಿದ್ದಾರೆ.ಇದಕ್ಕೆ ಉತ್ತರಿಸಿದ ಶ್ರೀ ರಾಮುಲು, ‘ನನಗೂ ಗೊತ್ತಿಲ್ಲ. ಸಿಎಂ ಭೇಟಿ ಮಾಡಿ ಈ ಬಗ್ಗೆ ಚರ್ಚೆ ಮಾಡ್ತೀನಿ’ ಎಂದಿದ್ದಾರೆ. ಅಲ್ಲದೆ ಇಂದು ಮಧ್ಯಾಹ್ನ ವೇಳೆಗೆ ಶ್ರೀರಾಮುಲು ಸಿಎಂ ಅವರನ್ನು ಭೇಟಿ ಮಾಡಲಿದ್ದಾರೆ.
ಬಿ.ಶ್ರೀರಾಮುಲು ಕೈಯಲ್ಲಿರುವ ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್​ಗೆ ಸಿಎಂ ಯಡಿಯೂರಪ್ಪ ನೀಡಿದ್ದಾರೆ.
ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಕೆಲ ಸಂವಹನ ಕೊರತೆ ಇದೆ ಎಂಬ ದೂರು ಕೇಳಿಬರುತ್ತಿತ್ತು. ಅಲ್ಲದೆ ಕರೊನಾ ತಡೆಗೆ ಒಬ್ಬರ ಬಳಿಯೇ ಈ ಎರಡೂ ಖಾತೆ ಇದ್ದರೆ ಸೂಕ್ತ ಎನ್ನುವ ಅಭಿಪ್ರಾಯವೂ ವ್ಯಕ್ತವಾಗಿತ್ತು. ಮತ್ತೊಂದೆಡೆ ಸುಧಾಕರ್ ಕೂಡ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಯನ್ನು ಒಬ್ಬರೇ ನಿರ್ವಹಿಸಬೇಕು ಎಂದು ಒತ್ತಾಯ ಮಾಡಿದ್ದರು. ಈ ಎಲ್ಲ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಖಾತೆ ಬದಲಾವಣೆ ನಿರ್ಧಾರ ಕೈಗೊಂಡಿದ್ದಾರೆ ಎಂದು ಗೊತ್ತಾಗಿದೆ.
ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿಲ್ಲ: ಆದಿಚುಂಚನಗಿರಿ ಶ್ರೀಗಳ ಭೇಟಿ ಬಳಿಕ ಡಾ. ಸುಧಾಕರ್ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + fifteen =
Remember me
