ಚಿತ್ರದುರ್ಗ:ಡಿಆರ್​ಡಿಓ ಅಭಿವೃದ್ಧಿ ಪಡಿಸಿದ ಮಾನವ ರಹಿತ ಡ್ರೋನ್​ ವಿಮಾನವೊಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದಲ್ಲಿ ಪತನವಾಗಿದೆ.
ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ದಿ ಸಂಸ್ಥೆ(DRDO) ಸಿದ್ದಪಡಿಸಿದ ತಪಸ್​ ಎಂಬ ಯುದ್ದ ವಿಮಾನವು ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಸಮೀಪದ ಕುದಾಪುರ ವಾಯುನೆಲೆಯಿಂದ ಭಾನುವಾರ ಬೆಳಗ್ಗೆ ಹಾರಾಟ ಆರಂಭಿಸಿತ್ತು. ಹಾರಾಡುವ ವೇಳೆ ನಿಯಂತ್ರಣ ತಪ್ಪಿ ವಿಮಾನ ಪತನವಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
#WATCH| A Tapas drone being developed by the DRDO crashed today during a trial flight in a village of Chitradurga district, Karnataka. DRDO is briefing the Defence Ministry about the mishap and an inquiry is being carried out into the specific reasons behind the crash: Defence…pic.twitter.com/5YSfJHPxTw
ಇದನ್ನೂ ಓದಿ:ಜಿ-20 ಶೃಂಗಸಭೆಯನ್ನು ಆಡಳಿತ ಪಕ್ಷ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ: ಜೈರಾಮ್​ ರಮೇಶ್​
ವಿಮಾನ ಪತನವಾಗಿರುವ ಕುರಿತು DRDO ರಕ್ಷಣಾ ಇಲಾಖೆಗೆ ಮಾಹಿತಿ ನೀಡಿದ್ದು, ಅಪಘಾತದ ಹಿಂದಿನ ನಿರ್ದಿಷ್ಟ ಕಾರಣಗಳನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಡ್ರೋನ್​ ವಿಮಾನವು ಪತನವಾದ ಸುದ್ದಿ ಕೇಳುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮದ ಜನರು ಸ್ಥಳಕ್ಕೆ ದೌಡಾಯಿಸಿದ್ದು, ಕುತೂಹಲದಿಂದ ಅವಶೇಷಗಳನ್ನು ವೀಕ್ಷಿಸುತ್ತಿದ್ದಾರೆ. ಪೊಲೀಸರು ಹಾಗೂ DRDO ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲಿನೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
