ಬೆಂಗಳೂರು:ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಭದ್ರತಾ ವಿಭಾಗದ ಸಿಬ್ಬಂದಿಯೊಬ್ಬರು ಕರ್ತವ್ಯ ನಿರ್ವಹಣೆ ವೇಳೆ ತಮ್ಮ ಸರ್ವಿಸ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ನಾಗಸಂದ್ರ ನಿವಾಸಿ ಕರೇಗೌಡ (49) ಮೃತಪಟ್ಟವರು. ಬೈಯಪ್ಪನಹಳ್ಳಿ ಸಮೀಪದ ಡಿಆರ್‌ಡಿಒ ಭದ್ರತಾ ವಿಭಾಗದಲ್ಲಿ ಸಿಪಾಯಿಯಾಗಿ ಕೆಲಸ ಮಾಡುತ್ತಿದ್ದ ಕರೇಗೌಡ, ಬೆಳಗ್ಗೆ 6 ಗಂಟೆಗೆ ಕರ್ತವ್ಯಕ್ಕೆ ಹಾಜರಾಗಿದ್ದರು. 6.30ರ ಸುಮಾರಿಗೆ ತಮ್ಮ ಸರ್ವಿಸ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರೇಗೌಡ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಾಗಸಂದ್ರದಲ್ಲಿ ನೆಲೆಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರವೂ ಸಿಕ್ಕಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂತಾರ: ಒಂದಕ್ಕೂ ನಾಲ್ಕಕ್ಕೂ ನಡುವೆ ಎಷ್ಟು ಅಂತರ!?; ಬದಲಾಯ್ತು ರಿಷಬ್ ‘ಸ್ಟೇಟಸ್​’
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
