ಬೆಂಗಳೂರು:ರಾಜ್ಯದಲ್ಲಿ ಬರ ಪರಿಸ್ಥಿತಿಯ ಪರಿಣಾಮ 158 ತಾಲೂಕುಗಳ 26,106 ಹಳ್ಳಿಗಳ ಪೈಕಿ 2,207 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಬರಗಾಲವು ಕುಡಿಯುವ ನೀರಿನ ಮೇಲೆ ಹೆಚ್ಚು ಪರಿಣಾಮಬೀರಿದೆ. ಗ್ರಾಮೀಣ ಕುಡಿಯುವ ನೀರು ವ್ಯವಸ್ಥೆ ಮೇಲೆ ನಿಗಾವಹಿಸಿ, ಆದ್ಯತೆಯ ಮೇಲೆ ಕ್ರಮಕೈಗೊಳ್ಳಲಾಗಿದೆ. ಅಗತ್ಯ ಆರ್ಥಿಕ ನೆರವು ಒದಗಿಸುವ ಜತೆಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ.
ಸಮಸ್ಯಾತ್ಮಕ ಗ್ರಾಮಗಳ ಪೈಕಿ 548 ಗ್ರಾಮಗಳಿಗೆ 846 ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. 1,659 ಗ್ರಾಮಗಳಿಗೆ ನೀರು ಒದಗಿಸಲು 2,098 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣೆ ನಿಧಿಯಡಿ ಲಭ್ಯ ಅನುದಾನವನ್ನು ಮೊದಲ ಆದ್ಯತೆಯಾಗಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಬಳಸಿಕೊಳ್ಳಲಾಗುತ್ತಿದೆ. ಹೆಚ್ಚುವರಿಯಿಂದ ಇಲಾಖೆಯಿಂದ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗೆ 20 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಜಿಲ್ಲೆಗಳಲ್ಲಿ 4890 ಬಹುಗ್ರಾಮ ಯೋಜನೆಗಳು ಕಾರ್ಯನಿರ್ವಹಿಸುತ್ತಿವೆ. ಈ ಯೋಜನೆಗಳ ಮೂಲಕ 6,828 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುತ್ತಿದ್ದು, ಹೆಚ್ಚಿನವು ನದಿ ಆಧಾರಿತವಾಗಿವೆ. ಜಲಾಶಯಗಳ ಮೇಲ್ಭಾಗದಿಂದ ನೀರನ್ನು ತೆಗೆದುಕೊಳ್ಳುವಮಟ್ಟಿಗೆ ಸಮರ್ಥವಾಗಿವೆ.
ಯೋಜನೆಗಳ ಜಲ ಮೂಲಗಳು ಬತ್ತಿ ಹೋಗಿರುವ ಕಾರಣ ಜಲಾಶಯಗಳ ತಗ್ಗುಪ್ರದೇಶಗಳೀಂದ ನೀರು ತೆಗೆದುಕೊಳ್ಳಲು ಸಾಧ್ಯವಾಗದೆ, ಕುಡಿಯುವ ಕೊರತೆ ಉಂಟಾಗಿದೆ. ಜಿಲ್ಲಾವಾರು ಪಡೆದ ವಿವರಗಳ ಪ್ರಕಾರ 413 ಗ್ರಾಮಗಳನ್ನು ಒಳಗೊಂಡ 37 ಬಹುಗ್ರಾಮ ಯೋಜನೆಗಳ ಜಲಮೂಲಗಳು ಕಳೆದ ಏಳು ದಿನಗಳಲ್ಲಿ ಒಣಗಿವೆ.
ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಟ್ಯಾಂಕರ್ ಹಾಗೂ ಬಾಡಿಗೆ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಅಭಾವ ನೀಗಿಸಲು ಹೆಚ್ಚಿನ ಗಮನಹರಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + nineteen =
Remember me
