ರಾಜ್ಯದ ಜನರನ್ನು ಹೈರಾಣಾಗಿಸಿರುವ ಬಿಸಿಲಾರ್ಭಟ ಹಳ್ಳಿಗಾಡಿನ ಜನತೆಗೆ ಜಲಸಂಕಷ್ಟ ತಂದೊಡ್ಡಿದೆ. ಬಿರು ಬೇಸಿಗೆಯಿಂದಾಗಿ ಗ್ರಾಮೀಣ ಭಾಗದಲ್ಲಿ ಜೀವಸೆಲೆ ಬತ್ತಿಹೋಗಿರುವ ಪರಿಣಾಮ ಜನರು ನೀರಿಗೆ ತತ್ವಾರ ಎದುರಿಸುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣದ ಪರಿಹಾರವಾಗಿ 68 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಕೈತೊಳೆದುಕೊಂಡಿದೆ.
ನೀರಿನ ಸಮಸ್ಯೆ ನೀಗಿಸಬೇಕಾದ ಗ್ರಾಮೀಣಾ ಭಿವೃದ್ಧಿ ಇಲಾಖೆಗೆ ಅನುದಾನದ ಕೊರತೆ ಎದುರಾಗಿದೆ. ಕೊಟ್ಟಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಏಪ್ರಿಲ್​ನಲ್ಲೇ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 20 ರಿಂದ 100 ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆಗೆ ಸಿಲುಕಿಕೊಂಡಿವೆ.
ಈ ಸಂಖ್ಯೆ ಕೆಲವೇ ದಿನಗಳಲ್ಲಿ ದುಪ್ಪಟ್ಟಾಗುವ ಸಾಧ್ಯತೆ ಇದೆ. ನೀರಿನ ಮೂಲಗಳೇ ಇಲ್ಲದ ಹಳ್ಳಿಗಳ ಸ್ಥಿತಿಯಂತೂ ಹೇಳತೀರದಾಗಿದೆ. ಇದ್ದ ಬೋರ್​ವೆಲ್ ಕೆಟ್ಟುಹೋಗಿದೆ. ಇಲ್ಲವೇ ಜಲಸೆಲೆ ಬತ್ತಿಹೋಗಿದೆ. ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದರೂ, ಈ ತನಕ ಯಾವ ತಾಲೂಕುಗಳನ್ನೂ ಸರ್ಕಾರ ಬರಪೀಡಿತ ಎಂದು ಘೋಷಿಸಿಲ್ಲ. ಈ ಪ್ರಕ್ರಿಯೆ ಇನ್ನಷ್ಟು ತಡವಾಗಬಹುದು ಎಂಬ ಕಾರಣದಿಂದ ಕಳೆದ ಮೂರು ವರ್ಷ ಯಾವ್ಯಾವ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸ ಲಾಗಿತ್ತೋ ಅವುಗಳನ್ನೇ ಗ್ರಾಮೀಣಾಭಿವೃದ್ಧಿ ಇಲಾಖೆ ಪಟ್ಟಿ ಮಾಡಿದೆ. ಮಾತ್ರವಲ್ಲ, ಅಲ್ಲಿಗೆ ತುರ್ತಾಗಿ ಒಂದಿಷ್ಟು ಅನುದಾನವನ್ನೂ ಬಿಡುಗಡೆ ಮಾಡಿದೆ.
ಎಲ್ಲೆಲ್ಲಿ ಸಮಸ್ಯೆ?: ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಕುಡಿವ ನೀರಿನ ಸಮಸ್ಯೆ ತಲೆದೋರಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಗ್ಗೆ ಅತಿ ಹೆಚ್ಚು ದೂರುಗಳು ದಾಖಲಾಗುತ್ತಿವೆ.
ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಅಗತ್ಯವಿರುವ ಕಡೆಯಲ್ಲಿ ಬೋರ್​ವೆಲ್ ಕೊರೆಸಲು, ಟ್ಯಾಂಕರ್ ಬಳಸಲು ಸೂಚನೆ ನೀಡಲಾಗಿದೆ. ಪರಿಸ್ಥಿತಿ ನಿಭಾಯಿಸಲು ತಕ್ಷಣಕ್ಕೆ ಸರ್ಕಾರ 68 ಕೋಟಿ ಹಣ ನೀಡಿದ್ದು, ಅದನ್ನು ಎಲ್ಲ ಜಿಪಂಗಳಿಗೆ ಬಿಡುಗಡೆ ಮಾಡಲಾಗಿದೆ.
| ಎಲ್.ಕೆ.ಅತೀಕ್, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − ten =
Remember me
