ರಾಮನಗರ:ಬಹುಶಃ ಮಟಮಟ ಮಧ್ಯಾಹ್ನವಾದ ಕಾರಣ ಯಮರಾಜ ವಿಶ್ರಾಂತಿ ಪಡೆದಿದ್ದ ಅನಿಸುತ್ತದೆ. ಈ ಕಾರಣದಿಂದ ಘೋರ ದುರಂತವೊಂದು ತಪ್ಪಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಬುಧವಾರ ನಡೆದಿದೆ.
ಮೈಸೂರು ಕಡೆಯಿಂದ ಬೆಂಗಳೂರಿನತ್ತ ವೇಗವಾಗಿ ಬರುತ್ತಿದ್ದ ಕಂಟೇನರ್​ ಲಾರಿಯೊಂದು ಚಾಲಕನನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆ ದಾಟಿ ಸರ್ವೀಸ್​ ರೋಡ್​ಗೆ ನುಗ್ಗಿರುವ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಸಮೀಪದ ಸಂಕಲಗೆರೆ ಗೇಟ್ ಬಳಿ ನಡೆದಿದೆ.
ಇದನ್ನೂ ಓದಿ:ನಟ, ನಿರೂಪಕ ಮಾಸ್ಟರ್​ ಆನಂದ್​ ಪುತ್ರಿ ವಂಶಿಕ ಹೆಸರಿನಲ್ಲಿ ವಂಚನೆ
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕು ಸಾಗಾಣಿಕೆ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ, ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಬಳಿ ರಸ್ತೆ ವಿಭಜಕವನ್ನು ದಾಟಿ ಸರ್ವೀಸ್​ ರಸ್ತೆಗೆ ನುಗ್ಗಿದೆ. ಸಮೀಪ ಇದ್ದ ಅಂಗಡಿಯೊಂದರ ಸಿಸಿಟಿವಿಯಲ್ಲಿ ಘೋರ ದೃಶ್ಯ ಸೆರೆಯಾಗಿದೆ.
ಅದೃಷ್ಟವಶಾತ್ ಈ ಸಮಯದಲ್ಲಿ ಯಾವುದೇ ವಾಹನಗಳು ಬಾರದ ಹಿನ್ನೆಲೆಯಲ್ಲಿ ಘೋರ ದುರಂತ ತಪ್ಪಿದಂತಾಗಿದೆ. ವಾಹನ ಎಡಭಾಗದಿಂದ ಬಲಭಾಗಕ್ಕೆ ರಭಸದಿಂದ ನುಗ್ಗಿರುವ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − one =
Remember me
