ಬೆಂಗಳೂರು:ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.
ಇತ್ತೀಚೆಗೆ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್​ಇಡಿ ದೀಪ ಅಳವಡಿಸಿದ ವಾಹನಗಳ ವಿರುದ್ಧ ರಾಜ್ಯ ವ್ಯಾಪಿ ಕೇಸ್ ದಾಖಲಿಸಲಾಗುತ್ತಿದೆ. ಇದೀಗ ವಿರುದ್ಧ ದಿಕ್ಕು, ಫುಟ್​ಪಾತ್ ಮೇಲೆ ವಾಹನ ಚಾಲನೆ ವಿರುದ್ಧ ಆ.1ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್​ಕುಮಾರ್ ಆದೇಶಿಸಿದ್ದಾರೆ.
ಎಲ್​ಇಡಿ ಅಳವಡಿಸಿದ್ದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಲಾಗಿತ್ತು. ಇದೇ ರೀತಿ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ ಪಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಾಚರಣೆ ನಡೆಸುವುದು. ಜೊತೆಗೆ ದೋಷಪೂರಿತ ನಂಬರ್ ಪ್ಲೇಟ್​ಗಳ ವಿರುದ್ಧ ಆಗಸ್ಟ್ 1 ರಿಂದ ರಾಜ್ಯ ವ್ಯಾಪಿ ವಿಶೇಷ ಕಾರ್ಯಾಚರಣೆ ನಡೆಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಚಾಲನೆ ಮಾಡುವ ವಾಹನ ಚಾಲಕ/ಸವಾರರ ವಿರುದ್ಧ ಬಿಎನ್​ಎಸ್ 281ರ ಅನ್ವಯ ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆ 184 ಅನ್ವಯ ಎಫ್​ಐಆರ್ ದಾಖಲಿಸಲು ಪೊಲೀಸರಿಗೆ ಸೂಚಿಸಿದ್ದಾರೆ.
ಬೆಂಗಳೂರು ನಗರ ಸೇರಿ ನಗರ ಪ್ರದೇಶದಲ್ಲಿ ಫುಟ್​ಪಾತ್ ಮೇಲೆ ದ್ವಿಚಕ್ರ ವಾಹನ ಚಲಾಯಿಸುವುದು ಸಾಮಾನ್ಯವಾಗಿದೆ. ಇಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇದಕ್ಕೂ ಮೊದಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶಕ್ಕೆ ಸಾಮಾಜಿಕ ಜಾಲತಾಣ, ಕರಪತ್ರ ವಿತರಣೆ ಮತ್ತು ಧ್ವನಿ ವರ್ಧಕಗಳಲ್ಲಿ ತಿಳಿವಳಿಕೆ ನೀಡಬೇಕು. ಬಳಿಕ ಆ.1ರಿಂದ ವಿಶೇಷ ಕಾರ್ಯಾಚರಣೆ ಕೈಗೊಂಡು ಮಾಸಾಂತ್ಯಕ್ಕೆ ವರದಿ ಸಲ್ಲಿಸುವಂತೆ ಎಲ್ಲ ಘಟಕಗಳಿಗೆ ಅಲೋಕ್​ಕುಮಾರ್ ಆದೇಶಿಸಿದ್ದಾರೆ.
ಮುಂಬೈನ ಹಲವೆಡೆ 20.ಸೆಂ.ಮೀ ಮಳೆ ದಾಖಲು: ವರುಣನ ಹೊಡೆತಕ್ಕೆ ಜನರು ತತ್ತರ…!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:six − two =
Remember me
