ಬೆಂಗಳೂರು:ಮಿಕ್ಸಿಯಲ್ಲಿನ ಮೋಟಾರ್ ಹಾಗೂ ಟಿವಿಯ ಬಿಡಿಭಾಗಗಳನ್ನು ಬಳಸಿ 600 ಡ್ರೋನ್​ಗಳನ್ನು ತಯಾರಿಸಿದ್ದೇನೆ. ನನಗೆ ಸಾಕಷ್ಟು ಪ್ರಶಸ್ತಿಗಳು ಹಾಗೂ ವಿದೇಶಿ ಕಂಪನಿಗಳಿಂದ ಆಫರ್​ ಬಂದಿವೆ ಎಂದು ಕಟ್ಟುಕತೆ ಕಟ್ಟಿದ್ದ ನಕಲಿ ವಿಜ್ಞಾನಿ ಡ್ರೋನ್​ ಪ್ರತಾಪ್​ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನೆಟ್ಟಿಗರ ವಿರುದ್ಧ ಪ್ರತಾಪ್​ ಕಿಡಿಕಾರಿದ್ದಾರೆ.
ಇದನ್ನೂ ಓದಿ:ಡ್ರೋನ್​ ಪ್ರತಾಪ್​ ಬಡತನದ ಬೇಗೆ ಕಟ್ಟುಕಥೆ: ಅವನ ಕುಟುಂಬ ಹಿನ್ನೆಲೆ ಏನು ಗೊತ್ತಾ?
ಡ್ರೋನ್​ ಪ್ರತಾಪ್​ ಅವರು ಆತ್ಮಹತ್ಯೆ ಶರಣಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪೋಸ್ಟ್​ ವಿರುದ್ದ ಪ್ರತಾಪ್​ ಕಿಡಿಕಾರಿದ್ದಾರೆ.
ವೈರಲ್​ ಆಗಿರುವ ಪೋಸ್ಟ್​ ಅನ್ನು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಅಪ್​ಲೋಡ್​ ಮಾಡಿ, ನನ್ನ ಕುಟುಂಬ ಚಿಂತೆಗೀಡಾಗಿದೆ. ಕೆಲವು ಜನರು ತಮ್ಮ ಮಿತಿಗಳನ್ನು ಮೀರುತ್ತಿದ್ದಾರೆ. ನಾನು ಈ ಬಗ್ಗೆ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ನಾನು ಜೀವಂತವಾಗಿದ್ದೇನೆ ದಯವಿಟ್ಟು ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಮನವಿಯೊಂದಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಇದನ್ನೂ ಓದಿ:‘ಕರ್ನಾಟಕದ ನೆರೆ ಹಾವಳಿಯಲ್ಲೂ ನನ್ನದೇ ಡ್ರೋನ್‌ ಬಳಕೆ- ಸತ್ಯ ಶೀಘ್ರ ಬಹಿರಂಗಪಡಿಸುವೆ‘
https://www.instagram.com/p/CCnoKVrn-Wu/
ಇದನ್ನೂ ಓದಿ:ಯಾಮಾರಿಬಿಟ್ಟೆನಪ್ಪಾ… ಕಣ್ಣು ಕಿತ್ತರೂ ನಿದ್ದೆ ಬರ್ತಿಲ್ಲ: ಜಗ್ಗೇಶ್‌ ನೋವಿನ ನುಡಿ
ಅಂದಹಾಗೆ ಡ್ರೋನ್​ ಪ್ರತಾಪ್​ ಅವರ ಅಸಲಿಯತ್ತು ಬಯಲಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತಾಪ್​ ಅವರು ಅನೇಕ ವೇದಿಕೆಗಳಲ್ಲಿ ಮಾತನಾಡಿರುವ ವಿಡಿಯೋವನ್ನು ಟ್ರೋಲ್​ ಮಾಡಲಾಗುತ್ತಿದೆ. ಅವರ ಫೋಟೋಗಳ ಮೇಲೆ ಕಮೆಂಟ್ ಮಾಡಿ ಹರಿಬಿಡಲಾಗುತ್ತಿದೆ. ಇದರ ನಡುವೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂಬ ಪೋಸ್ಟ್​ ಸಹ ವೈರಲ್​ ಆಗಿದ್ದು, ಪ್ರತಾಪ್​ ಆಕ್ರೋಶಕ್ಕೆ ಕಾರಣವಾಗಿದೆ.
ಡ್ರೋನ್ ತಯಾರಿಸಿದ್ದಾಗಿ ರೈಲು ಬಿಟ್ಟ ಪ್ರತಾಪ್: ಐಷಾರಾಮಿ ಜೀವನ ನಡೆಸುತ್ತಿರುವ ನಕಲಿ ವಿಜ್ಞಾನಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
