ಬೆಂಗಳೂರು:ಇಂದು ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಹಣವನ್ನು ಘೋಷಿಸಿತು. ಈ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ:ಕಾಸ್ಮೆಟಿಕ್ ಸರ್ಜರಿಯಿಂದ ದುರಂತ ಅಂತ್ಯ ಕಂಡ ಸೆಲೆಬ್ರಿಟಿಗಳು ಇವರೇ ನೋಡಿ!
“ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್​ಗೆ ಧನ್ಯವಾದಗಳು. ಎನ್​ಡಿಆರ್​ಎಫ್ ನಿಯಮವಾಳಿ ಪ್ರಕಾರ, ರಾಜ್ಯಕ್ಕೆ 18,171 ಕೋಟಿ ರೂ. ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ 3,498.98 ಕೋಟಿ ರೂ.ಗೆ ಅನುಮೋದನೆ ನೀಡಿ, 3,454 ಕೋಟಿ ರೂ. ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ” ಎಂದಿದ್ದಾರೆ.
“ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ, ನಮ್ಮಲ್ಲಿನ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ನರೇಂದ್ರ ಮೋದಿ ಸರ್ಕಾರ ಸುಪ್ರೀಂ ಕೋರ್ಟ್​​ಗೆ ವಚನ ನೀಡಿತ್ತು. ಅದನ್ನು ಪಾಲಿಸುವ ಸುಲವಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ” ಎಂದರು.
“ಬರಪರಿಹಾರ ಬಿಡುಗಡೆಯಲ್ಲಿ ಬಿಜೆಪಿ ನಾಯಕರದ್ದಾಗಲಿ, ಕೇಂದ್ರ ಬಿಜೆಪಿ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ, ರೊಚ್ಚಿಗೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ” ಎಂದು ಹೇಳುವ ಮೂಲಕ ಕಮಲದ ವಿರುದ್ಧ ವ್ಯಂಗ್ಯವಾಡಿದ್ದಾರೆ.
ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

ನಿಮಗೆ ಏನೂ ಗೊತ್ತಿಲ್ಲ… RCB ಪ್ಲೇಆಫ್ ಕನಸು ಇನ್ನೂ ಜೀವಂತ: ವಿಲ್​ ಜ್ಯಾಕ್ಸ್​ ಬಿಚ್ಚಿಟ್ರು ಶಾಕಿಂಗ್ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
