ಬೆಂಗಳೂರು:ಬರ ಪರಿಹಾರ ವಿಷಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಮಾಜಿ ಸಿಎಂ ಎಚ್‌ಡಿ.ಕುಮಾರಸ್ವಾಮಿ ದೂರಿದರು.
ಬೆಂಗಳೂರಿನಲ್ಲಿ ಭಾನುವಾರ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು ಅವರು, ಅತ್ಯಲ್ಪ ಪರಿಹಾರ ಕೊಟ್ಟು ರಾಜ್ಯದ ಜನರಿಗೆ ವಂಚನೆ ಎಸಗಿದ್ದು ಯುಪಿಎ ಸರ್ಕಾರ ಎಂದರು.
ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ಕಡಿಮೆ ಹಣ ಕೊಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರ ಹುಯಿಲೆಬ್ಬಿಸಿದೆ. ಎನ್‌ಡಿಆರ್‌ಎ್ ಮಾರ್ಗಸೂಚಿ ಪ್ರಕಾರ 4,860 ಕೋಟಿ ರೂ.ಕೊಟ್ಟರೆ ಸಾಕು ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಈಗ ಕೇಂದ್ರ ಸರ್ಕಾರ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ಈಗ ನೋಡಿದರೆ ನಾವು 18172 ಕೋಟಿ ರೂ. ಕೇಳಿದ್ದು ಎಂದು ಹೇಳುತ್ತಿದ್ದಾರೆ. ಇವರು ಪದೇ ಪದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ನನಗಿರುವ ಮಾಹಿತಿ ಪ್ರಕಾರ ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರದ 2004ರಿಂದ 2013ರವರೆಗಿನ ಅವಧಿಯಲ್ಲಿ ವಿವಿಧ ಸಂದರ್ಭದಲ್ಲಿ ಎನ್‌ಡಿಆರ್‌ಎ್ ಮಾರ್ಗಸೂಚಿಯಂತೆ ಬರ ಪರಿಹಾರಕ್ಕಾಗಿ ಕೇವಲ ಶೇ.8ರಷ್ಟು ಹಣ ನೀಡಿದ್ದಾರೆ. ನರೇಂದ್ರ ಮೋದಿ ಅವರು ಬಂದ ಮೇಲೆ ಅಂದರೆ, 2014ರಿಂದ ಇಲ್ಲಿಯವರೆಗೆ ಈಗ ಬಿಡುಗಡೆ ಆಗಿರುವ 3,454 ಕೋಟಿ ರೂ. ಹೊರತುಪಡಿಸಿ ಶೇ.38ರಷ್ಟು ಬರ ಪರಿಹಾರ ಹಣ ರಾಜ್ಯಕ್ಕೆ ಬಂದಿದೆ. ಕಾಂಗ್ರೆಸ್ ಸರ್ಕಾರ ಶೇ.8 ಕೊಟ್ಟರೆ, ಎನ್‌ಡಿಎ ಸರ್ಕಾರ ಶೇ.38 ಹಣ ಕೊಟ್ಟಿದೆ. ಅನ್ಯಾಯ ಯಾರಿಂದ ಆಗಿದೆ ಎಂಬುದು ಇಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಕುಮಾರಸ್ವಾಮಿ ಅಂಕಿ-ಅಂಶಗಳನ್ನು ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
