ಬೆಂಗಳೂರು:ನಟ ಹಾಗೂ ನಿರ್ದೇಶಕ ಇಂದ್ರಜಿತ್​ ಲಂಕೇಶ್​ಗೆ ಸಿಸಿಬಿಯಿಂದ ಮತ್ತೊಮ್ಮೆ ಬುಲಾವ್ ಬಂದಿದೆ. ನಾಳೆ (ಜ.28) ಬೆಳಗ್ಗೆ 11ಕ್ಕೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡುವಂತೆ ಸಿಸಿಬಿ ಸೂಚಿಸಿದೆ.
ಸ್ಯಾಂಡಲ್​ವುಡ್​ನ ಹಲವು ನಟ-ನಟಿಯರು ಮತ್ತು ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ. ಈ ಮಾಫಿಯಾದ ಹಿಂದೆ ರಾಜಕಾರಣಿಗಳು, ಮಾಡೆಲ್ ಏಜೆನ್ಸಿಗಳು ಎಲ್ಲರೂ ಭಾಗಿಯಾಗಿದ್ದಾರೆ. ಆ ಬಗ್ಗೆ ನನ್ನ ಬಳಿ ಮಾಹಿತಿ ಇದೆ ಎಂದು ಕಳೆದ ಐದು ತಿಂಗಳ ಹಿಂದೆ ಅಂದರೆ 2020ರ ಆಗಸ್ಟ್​ನಲ್ಲಿ ಇಂದ್ರಜಿತ್​ ಲಂಕೇಶ್​ ಕೊಟ್ಟ ಹೇಳಿಕೆ ಕನ್ನಡ ಚಿತ್ರರಂಗ ಮಾತ್ರವಲ್ಲ, ಇಡೀ ರಾಜ್ಯದಲ್ಲೇ ತಲ್ಲಣ ಮೂಡಿಸಿತ್ತು.ಇದನ್ನೂ ಓದಿರಿಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…
ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ನನಗೆ ಸರ್ಕಾರ ಸೂಕ್ತ ರಕ್ಷಣೆ ಕೊಟ್ಟರೆ ಇನ್ನಷ್ಟು ಸತ್ಯಗಳನ್ನು ಹೇಳುತ್ತೇನೆ ಎಂದೂ ಇಂದ್ರಜಿತ್​ ಅಂದು ಹೇಳಿದ್ದರು. ಈ ಹೇಳಿಕೆ ಬೆನ್ನಲ್ಲೇ ಕಳೆದ ಆ.31ರಂದು ಇಂದ್ರಜಿತ್​ ಲಂಕೇಶ್​ರನ್ನು ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಿ ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದರು.
ಇದಾದ ಬಳಿಕ ಅಂದ್ರೆ ಕಳೆದ ಡಿ. 18ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಇಂದ್ರಜಿತ್ ಲಂಕೇಶ್, ಬರೀ ನಟಿಯರು ಮಾತ್ರ ಡ್ರಗ್ಸ್​ ತಗೋಳೋದಾ? ನಟರು ತೆಗೆದುಕೊಂಡಿಲ್ವಾ? ಡ್ರಗ್ ಹಿನ್ನೆಲೆ ಇರುವವರನ್ನ ಏಕೆ ಅರೆಸ್ಟ್ ಮಾಡಿಲ್ಲ? ಎಂದು ಅಸಮಾಧಾನ ಹೊರಹಾಕಿದ್ದರು. ಅಲ್ಲದೆ ಡ್ರಗ್ಸ್ ಪ್ರಕರಣದ ತನಿಖೆ ಬಗ್ಗೆ ಅಸಮಧಾನ ಇದೆ. ಇನ್ನೂ ಸರಿಯಾದ ತನಿಖೆ‌ ನಡೆದಿಲ್ಲ ಎಂದಿದ್ದರು. ಇದೀಗ ಮತ್ತೊಮ್ಮೆ ವಿಚಾರಣೆಗೆ ಕರೆದಿರುವ ಸಿಸಿಬಿ, ನಾಳೆ ಬೆಳಗ್ಗೆ 11 ಗಂಟೆಗೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಿಸಿಬಿ ಡಿಸಿಪಿ ಬಸವರಾಜ್ ಅಂಗಡಿ ಮುಂದೆ ಹಾಜರಾಗುವಂತೆ ತಿಳಿಸಿದೆ.
ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದ ಮಾದಕ ನಟಿ ರಾಗಿಣಿ ದ್ವಿವೇದಿ ಮತ್ತು ಬಹುಭಾಷಾ ನಟಿ ಸಂಜನಾ ಗಲ್ರಾನಿ ಇಬ್ಬರೂ ಸದ್ಯ ಜಾಮೀನಿನ ಮೇರೆಗೆ ಹೊರ ಬಂದಿದ್ದಾರೆ.
ಡ್ರಗ್ಸ್​ ಕೇಸ್​ನಲ್ಲಿ ನಟರನ್ನೇಕೆ ಬಂಧಿಸಿಲ್ಲ? ಅಸಮಾಧಾನ ಹೊರಹಾಕಿದ ಇಂದ್ರಜಿತ್​ ಲಂಕೇಶ್​

ಬೆಣ್ಣೆಹೊಳೆ ಫಾಲ್ಸ್​ ಬಳಿ ಪ್ರೇಮಿಗಳಿಬ್ಬರ ಶವ ಸಿಕ್ಕ ಮರುದಿನವೇ ಪ್ರಿಯಕರನ ತಂದೆ ಸಾವು! ಮನಕಲಕುತ್ತೆ ಸಾವಿನ ಕಾರಣ

ಬಾಯ್​ಫ್ರೆಂಡ್​ ಇಲ್ಲದವರಿಗೆ ಕಾಲೇಜಿಗೆ ಪ್ರವೇಶವಿಲ್ಲ! ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿವಿ

ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − two =
Remember me
