ಬೆಂಗಳೂರು:ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಪಟ್ಟು ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಸ್ಯಾಂಡಲ್​ವುಡ್​ನ ಮಾದಕ ನಟಿ ರಾಗಿಣಿ ದ್ವಿವೇದಿಗೆ ಇಂದು ಜಾಮೀನು ಸಿಕ್ಕಿದ್ದರೂ ಬಿಡುಗಡೆ ಭಾಗ್ಯ ಸಿಗಲಿಲ್ಲ.
2020ರ ಸೆಪ್ಟೆಂಬರ್​ 14ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರುವ ರಾಗಿಣಿ, ಜಾಮೀನು ಕೋರಿ ಸುಪ್ರೀಂಕೋರ್ಟ್​ನ ಮೊರೆಹೋಗಿದ್ದರು. ಸುಪ್ರೀಂ ಕೋರ್ಟ್‌ ಗುರುವಾರ ರಾಗಿಣಿಗೆ ಜಾಮೀನು ಮಂಜೂರು ಮಾಡಿದೆ. ನಾಲ್ಕೂವರೆ ತಿಂಗಳ ಬಳಿಕ ಜೈಲಿನಿಂದ ಬಿಡುಗಡೆ ಆಗುವ ಖುಷಿಯಲ್ಲಿದ್ದ ರಾಗಿಣಿಗೆ ಮತ್ತೊಂದು ಆಘಾತ ಎದುರಾಗಿದೆ.ಇದನ್ನೂ ಓದಿರಿತಂದೆ-ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ, ಶವಗಳನ್ನ ಕಂಡು ಬೆಚ್ಚಿಬಿದ್ದ ಸ್ಥಳೀಯರು
ಸುಪ್ರೀಂಕೋರ್ಟ್​ನ ಆದೇಶ ಪ್ರತಿ ಎನ್​ಡಿಪಿಎಸ್ ನ್ಯಾಯಾಲಯಕ್ಕೆ ಇನ್ನೂ ಬಂದಿಲ್ಲ. ಇಂದು ಸಂಜೆ ಸುಪ್ರೀಂ ಕೋರ್ಟ್​ನಲ್ಲಿ ಆದೇಶ ಪ್ರತಿ ಪಡೆಯಬೇಕಿತ್ತು. ಹಾಗಾಗಿ ಇಂದು ರಾಗಿಣಿಗೆ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ನಾಳೆ ಎನ್​ಡಿಪಿಎಸ್ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟಿನ ಆದೇಶ ಪತ್ರಿಯನ್ನ ರಾಗಿಣಿ ಪರ ವಕೀಲರು ಹಾಜರು ಪಡಿಸಲಿದ್ದಾರೆ. ನಾಳೆ ಸಂಜೆ ಬಳಿಕವೇ ರಾಗಿಣಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಗಲಿದೆ.
ಜಾಮೀನು ಸಿಕ್ಕ ಖುಷಿಯಲ್ಲಿದ್ದ ರಾಗಿಣಿಗೆ ಜೈಲಿನ ಬೂತ್​ಫೋನ್‌ ಮೂಲಕ ಪೋಷಕರೊಂದಿಗೆ ಮಾತನಾಡಿದ್ದರು. ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಪ್ಯಾಕ್ ಮಾಡಿಕೊಂಡಿದ್ದರು. ನಾಳೆ ಸಂಜೆಯವರೆಗೆ ಕಾಯಬೇಕಾದ ಹಿನ್ನೆಲೆ ಮಂಕಾದ ರಾಗಿಣಿ ಕೊಠಡಿಯಲ್ಲಿ ಸುಮ್ಮನೆ ಕುಳಿತಿದ್ದರು ಎಂದು ಮೂಲಗಳು ತಿಳಿಸಿವೆ.
100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್​ಬಿಐ

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
