ಬೆಂಗಳೂರು:ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಸುನೀಶ್ ಹೆಗ್ಡೆ, ಸುಜಯ್, ಪ್ರಸಿದ್ಧ ಶೆಟ್ಟಿ ಸೇರಿ ಐವರು ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗಾಗಿ ಇಬ್ಬರು ಯುವಕರನ್ನು ಅಪಹರಿಸಿ, ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ್ದ ಪ್ರಕರಣಗಳು ಬೆಳಕಿಗೆ ಬಂದಿವೆ.
ಅಪಹರಣಕ್ಕೆ ಒಳಗಾಗಿದ್ದ ಜಯನಗರದ ನಿವಾಸಿ ಶಶಾಂಕ್ ಸುರೇಶ್ ಹಾಗೂ ಕುಮಾರಸ್ವಾಮಿ ಲೇಔಟ್‌ನ ಅಭಿಲಾಷ್ ಎಂಬುವರು ನೀಡಿದ ದೂರಿನ ಮೇರೆಗೆ ಸುನೀಶ್ ಹೆಗ್ಡೆ, ಸುಜಯ್, ಪ್ರಸಿದ್ಧ ಶೆಟ್ಟಿ, ಸುರೇಶ್, ಪ್ರದೀಪ್ ಸೇರಿದಂತೆ ಐವರ ವಿರುದ್ಧ ಕುಮಾರಸ್ವಾಮಿ ಲೇಔಟ್ ಹಾಗೂ ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.
ಏನಿದು ಪ್ರಕರಣ?:ಅಕ್ಟೋಬರ್ 1ರ ರಾತ್ರಿ 1.30ರಲ್ಲಿ ಸುನೀಶ್, ಸುಜಯ್, ಪ್ರಸಿದ್ಧ ಶೆಟ್ಟಿ ಸೇರಿ ಮತ್ತಿತರ ಐವರು ಜಯನಗರದಲ್ಲಿರುವ ಮನೆಗೆ ಬಂದಿದ್ದರು. ಈ ವೇಳೆ ಶ್ರೀಕೃಷ್ಣ ನಿಮ್ಮ ಮನೆಯಲ್ಲಿ ಬಚ್ಚಿಟ್ಟುಕೊಂಡಿದ್ದಾನೆಯೇ ಎಂದು ಕೇಳಿದ್ದರು. ಬಳಿಕ ನಿನ್ನ ಜತೆ ಮಾತನಾಡಬೇಕಿದೆ ಎಂದು ಹೇಳಿ ಕಾರಿನಲ್ಲಿ ಕೂರಿಸಿಕೊಂಡು, ಸಂಜಯನಗರದ ಅಪಾರ್ಟ್‌ಮೆಂಟ್‌ಗೆ ಕರೆದೊಯ್ದು ಕೈಕಾಲು ಕಟ್ಟಿ ಕೂಡಿಹಾಕಿದ್ದರು. ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಎಲ್ಲಿದ್ದಾನೆ ಎಂದು ತಿಳಿಸುವಂತೆ ಹಲ್ಲೆ ನಡೆಸಿದ್ದರು. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಗತಿಕಾಣಿಸುವುದಾಗಿ ಬೆದರಿಕೆ ಹಾಕಿ ಬಿಟ್ಟುಕಳುಹಿಸಿದರು ಎಂದು ಆರೋಪಿಸಿ ಶಶಾಂಕ್ ದೂರಿನಲ್ಲಿ ವಿವರಿಸಿದ್ದಾರೆ.
ಮನೆ ವಿಳಾಸಕ್ಕೆ ಗಾಂಜಾ ಕಳುಹಿಸುತ್ತೇವೆ!:ಮತ್ತೊಂದು ಪ್ರಕರಣದಲ್ಲಿ ಸರ್ಕಾರಿ ನೌಕರ ಅಭಿಲಾಷ್​ಗೂ ಹಲ್ಲೆ ನಡೆಸಿದ್ದಾರೆ. ಅದೇ ರಾತ್ರಿ 3 ಗಂಟೆಗೆ ಶಶಾಂಕ್‌ನಿಂದ ಕರೆ ಮಾಡಿಸಿ, ಮನೆಯಿಂದ ಹೊರಗೆ ಕರೆಸಿಕೊಂಡಿದ್ದರು. ಎರಡು ಕಾರುಗಳಲ್ಲಿ ಶಶಾಂಕ್ ಮತ್ತು ನನ್ನನ್ನು ಪ್ರತ್ಯೇಕವಾಗಿ ಕರೆದೊಯ್ದಿದ್ದರು. ಮಾರ್ಗಮಧ್ಯೆ ಕಾರು ನಿಲ್ಲಿಸಿ, ‘ಶ್ರೀಕೃಷ್ಣ ಎಲ್ಲಿದ್ದಾನೆ ತಿಳಿಸು. ಅವನು ಹಣ ಕೊಡದೆ ತಪ್ಪಿಸಿಕೊಂಡಿದ್ದಾನೆ’ ಎಂದು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದಿದ್ದರು. ಕುವಿನಿಂದ ಕೈಬೆರಳು ಕತ್ತರಿಸುವುದಾಗಿ ಬೆದರಿಸಿದ್ದರು. ಅಲ್ಲದೆ, ಶ್ರೀಕೃಷ್ಣ ಎಲ್ಲಿದ್ದಾನೆ ಎಂಬುದನ್ನು ಹೇಳಬೇಕು. ಇಲ್ಲವಾದರೆ, ನಿನ್ನ ಮನೆ ವಿಳಾಸಕ್ಕೆ ಗಾಂಜಾ ಕಳುಹಿಸಿ, ಸರ್ಕಾರಿ ನೌಕರಿಯಿಂದ ತೆಗೆಸುವುದಾಗಿ ಕೊಠಡಿಯೊಂದರಲ್ಲಿ ಕೂಡಿಹಾಕಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಮರುದಿನ ಶ್ರೀಕೃಷ್ಣನನ್ನು ಹುಡುಕಬೇಕು ಎಂದು ಕಾರಿನಲ್ಲಿ ನಗರದೆಲ್ಲೆಡೆ ಸುತ್ತಾಡಿಸಿ, ಮಧ್ಯಾಹ್ನ 3 ಗಂಟೆಯಲ್ಲಿ ಜಯನಗರದ ಅಶೋಕ ಪಿಲ್ಲರ್ ಬಳಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಿ ಅಭಿಲಾಷ್ ದೂರಿನಲ್ಲಿ ವಿವರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
‘ರೋಹಿಣಿ ಸಿಂಧೂರಿ ಐಎಎಸ್‌ ಪಾಸ್​ ಮಾಡಿರೋದೇ ಅನುಮಾನ…’

ತಾಯಿಯನ್ನು ಬಲಿ ಪಡೆದಿದ್ದ ಉಮಾಶ್ರೀ ಕಾರಿಗೆ ಮಗಳ ಜೀವವೂ ಹೋಯ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − six =
Remember me
