ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟಿನ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ, ತನ್ನ ವಿರುದ್ಧದ ಪ್ರಕರಣವನ್ನೇ ಕೈಬಿಡಿ ಎಂದು ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದಾನೆ.
ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಡ್ರಗ್ಸ್​ ಮಾಫಿಯಾ ಕೇಸಿನಲ್ಲಿ ಸ್ಯಾಂಡಲ್​ವುಡ್​ನ ‘ಮಾದಕ’ ನಟಿ ರಾಗಿಣಿ ದ್ವಿವೇದಿ, ಬಹುಭಾಷಾ ನಟಿ ಸಂಜನಾ ಗಲ್ರಾನಿ ಜತೆಗೆ ಹಲವು ಡ್ರಗ್ಸ್​ ಪೆಡ್ಲರ್​ಗಳು ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾರೆ. ಆದಿತ್ಯ ಆಳ್ವ ಮಾತ್ರ ಸಿಸಿಬಿ ಪೊಲೀಸರ ಕೈಗೆ ಸಿಗದೆ ಎಸ್ಕೇಪ್​ ಆಗಿದ್ದಾನೆ. ನಟಿಮಣಿಯರಿಬ್ಬರು ಸೇರಿ ಹಲವು ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈತ ಜಾಮೀನು ಅರ್ಜಿ ಸಲ್ಲಿಸುವುದನ್ನು ಬಿಟ್ಟು, ತನ್ನ ವಿರುದ್ಧದ FIR ರದ್ದು ಮಾಡುವಂತೆ ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ.ಇದನ್ನೂ ಓದಿರಿ‘ರಾಗಿಣಿಗೆ ನಾನೇ ಡ್ರಗ್ಸ್​ ಕೊಡುತ್ತಿದ್ದೆ… ಡ್ರಗ್ಸ್​ ಅಡಗಿಸಿಟ್ಟಿರುವ ಜಾಗವನ್ನೂ ತೋರಿಸುವೆ’
ಸ್ಯಾಂಡಲ್​ವುಡ್​ ಡ್ರಗ್ಸ್​ ಲಿಂಕ್ ಪ್ರಕರಣದ ಆರೋಪಿ ಆದಿತ್ಯ ಆಳ್ವ ಮಾಜಿ ಸಚಿವ ಜೀವರಾಜ್​ರ ಪುತ್ರ. ಹೆಬ್ಬಾಳ ಸಮೀಪ ನಾಲ್ಕು ಎಕರೆಗೂ ಹೆಚ್ಚಿನ ಜಾಗದಲ್ಲಿ “House of Life” ಹೆಸರಿನಲ್ಲಿ ರೆಸಾರ್ಟ್ ಹೊಂದಿರುವ ಆದಿತ್ಯ, ತಡರಾತ್ರಿ ಪಾರ್ಟಿಗಳನ್ನು ಆಯೋಜಿಸುತ್ತಿದ್ದ. ಈ ವೇಳೆ ಡ್ರಗ್ಸ್ ಸರಬರಾಜು ಆಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಸಿಸಿಬಿ ಪೊಲೀಸರು ಸೆ.15ರಂದು ಈ ರೆಸಾರ್ಟ್​ ಮೇಲೆ ದಾಳಿ ನಡೆಸಿದ್ದರು. ಈ ನಡುವೆ ಸದಾಶಿವನಗರದಲ್ಲಿರುವ ಆದಿತ್ಯನ ಮನೆಯನ್ನ ಶೋಧ ನಡೆಸಿದ ಸಿಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.
ಇದೀಗ ತನ್ನ ವಿರುದ್ಧದ ಪ್ರಕರಣವನ್ನೇ ಕೈಬಿಡಿ ಎಂದು ಕೋರಿ ಹೈಕೋರ್ಟ್​ಗೆ ಸಲ್ಲಿಸಿರುವ ಆದಿತ್ಯನ ಅರ್ಜಿ ಈ ವಾರದಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಡ್ರಗ್ಸ್ ಆರೋಪಿ ಆದಿತ್ಯ ಆಳ್ವನ ‘ಹೌಸ್​ ಆಫ್​ ಲೈಫ್’ ನೋಡಿದ್ರೆ ಬೆಚ್ಚಿಬೀಳ್ತೀರಿ!

‘ನಾವಿಬ್ಬರೂ ಒಟ್ಟಿಗೆ ಡ್ರಗ್ಸ್​ ಸೇವಿಸುತ್ತಿದ್ದೆವು, ಬಿಎಂಡಬ್ಲ್ಯು ಕಾರಿನಲ್ಲೇ ಹೋಟೆಲ್​ಗೆ ಕರೆದೊಯ್ಯುತ್ತಿದ್ದೆ…’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − two =
Remember me
