ಬೆಂಗಳೂರು:ಡ್ರಗ್ಸ್​ ಕೇಸ್​ ಸಂಬಂಧ ಮತ್ತೊಮ್ಮೆ ವಿಚಾರಣೆ ಎದುರಿಸಲು ನಟ ದಿಗಂತ್​ ಮಂಚಾಲೆ ಬುಧವಾರ ಬೆಳಗ್ಗೆ 11.20ರ ಸುಮಾರಿಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಆಗಮಿಸಿದರು.
ಸೆ.17ರಂದು ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್​ ಇಬ್ಬರೂ ಸಿಸಿಬಿ ವಿಚಾರಣೆ ಎದುರಿಸಿದ್ದರು. ಮತ್ತೊಂದು ಸುತ್ತಿನ ವಿಚಾರಣೆಗಾಗಿ ಬುಧವಾರ ಬೆಳಗ್ಗೆ 11ಕ್ಕೆ ಆಗಮಿಸುವಂತೆ ದಿಗಂತ್​ಗೆ ಮಾತ್ರ ಸಿಸಿಬಿ ನೋಟಿಸ್​ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 25 ನಿಮಿಷ ತಡವಾಗಿ ರಹಸ್ಯ ಸ್ಥಳದಿಂದ ಬಂದ ದಿಗಂತ್​, ನೇರವಾಗಿ ಸಿಸಿಬಿ ಕಚೇರಿ ಒಳಹೋದರು.
ಪ್ರಥಮ ಹಂತದ ವಿಚಾರಣೆಗೆ ನಟ ದಿಗಂತ್ ಹಾಗು ನಟಿ ಐಂದ್ರಿತಾ ರೇ ಸೆ.17ರಂದು ಹಾಜರಾಗಿದ್ದರು. ಈ ಬಾರಿ ದಿಗಂತ್​ ಒಬ್ಬರನ್ನು ಮಾತ್ರ ವಿಚಾರಣೆಗೆ ಅಧಿಕಾರಿಗಳು ಕರೆದಿದ್ದಾರೆ. ಸದ್ಯ ದಿಂಗತ್​ರನ್ನು ಎಸಿಪಿ‌ ಗೌತಮ್, ಇನ್​ಸ್ಪೆಕ್ಟರ್​ಗಳಾದ ಪುನೀತ್ ಹಾಗೂ ಮಲ್ಲೇಶ್ ಬೊಳತ್ತಿನ್ ಅವರು ವಿಚಾರಣೆ ನಡೆಸಲಿದ್ದಾರೆ.
ದಿಗಂತ್​ಗೆ ಮತ್ತೊಮ್ಮೆ ಸಿಸಿಬಿ ಡ್ರಿಲ್​!

‘ರಾಗಿಣಿಗೆ ನಾನೇ ಡ್ರಗ್ಸ್​ ಕೊಡುತ್ತಿದ್ದೆ… ಡ್ರಗ್ಸ್​ ಅಡಗಿಸಿಟ್ಟಿರುವ ಜಾಗವನ್ನೂ ತೋರಿಸುವೆ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
