ಮಂಗಳೂರು:ಡ್ರಗ್ಸ್​ ಕೇಸ್​ ಸಂಬಂಧ ಸಿಸಿಬಿ ನೋಟಿಸ್​ ಜಾರಿ ಮಾಡಿದ ಹಿನ್ನೆಲೆಯಲ್ಲಿ ಖ್ಯಾತ ನಿರೂಪಕಿ ಅನುಶ್ರೀ ಶನಿವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಸಿಸಿಬಿ ಕಚೇರಿ ಬರುವುದಾಗಿ ಹೇಳಿದ್ದ ಅನುಶ್ರೀ ಅಂದು ಬರಲೇ ಇಲ್ಲ. ಒಂದು ದಿನದ ಬಳಿಕ ಹಾಜರ್​ ಆಗಿದ್ದು, ಪಣಂಬೂರು ಠಾಣೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿರಿಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು
ಡ್ರಗ್ಸ್ ಕೇಸ್​ನಲ್ಲಿ ಡ್ಯಾನ್ಸರ್ ಕಂ ಬಾಲಿವುಡ್ ನಟ ಕಿಶೋರ್ ಅಮನ್​ ಶೆಟ್ಟಿ ಮತ್ತು ಕೋರಿಯೋಗ್ರಫರ್ ಕಂ ಆ್ಯಂಕರ್ ತರುಣ್​ನನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಆರೋಪಿಗಳು ತಾವು ಆಯೋಜಿಸಿದ್ದ ಪಾರ್ಟಿಯಲ್ಲಿ ಅನುಶ್ರೀ ಪಾಲ್ಗೊಂಡಿದ್ದಾಗಿ ಹೇಳಿದ್ದಾರೆ. ಅಲ್ಲದೆ ಅವರಿಬ್ಬರದ್ದೂ ಡ್ರಗ್ ಟೆಸ್ಟ್​ನ ವರದಿ ಪಾಸಿಟಿವ್​ ಬಂದಿದೆ.
ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಬಂದ ಸಿಸಿಬಿ ಪೊಲೀಸ್​ ತಂಡ ಅನುಶ್ರೀಗೆ ಸಮನ್ಸ್​ ಜಾರಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಬರುವುದಾಗಿ ನಿರೂಪಕಿ ಕೇಳಿಕೊಂಡಿದ್ದರು. ಆದರೆ, ಆ ದಿನ ತಪ್ಪಿಸಿಕೊಂಡಿದ್ದ ಅನುಶ್ರೀ ಶನಿವಾರ ಬೆಳಗ್ಗೆ ಮಂಗಳೂರು ಹೊರವಲಯದಲ್ಲಿರುವ ಪಣಂಬೂರು ಠಾಣೆಗೆ ಹಾಜರ್​ ಆಗಿದ್ದಾರೆ.
‘ನಾವು ಡ್ರಗ್ಸ್​ ಪಾರ್ಟಿ ಮಾಡ್ತಾ ಇದ್ವಿ, ಅದರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಿದ್ಲು…’

ಶೂಟಿಂಗ್​ ಸ್ಪಾಟ್​ನಲ್ಲೇ ಪ್ರಾಣಬಿಟ್ಟ ಪೋಷಕ ನಟನ ಕೊನೇ ಫೋಟೋ ಇದು!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eleven − ten =
Remember me
