ಬೆಂಗಳೂರು:ಸ್ಯಾಂಡಲ್‌‌‌ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನೈಜೀರಿಯಾ ಮೂಲದ ಮತ್ತೊಬ್ಬ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಓಸೀ (34) ಬಂಧಿತ. ಡ್ರಗ್ಸ್ ಕೇಸಿನಲ್ಲಿ ಬಂಧನಕ್ಕೆ ಒಳಗಾಗಿರುವ ಪೆಡ್ಲರ್ ಸೈಮನ್ ಸಹಚರನಾಗಿದ್ದಾನೆ. ಈ ಪ್ರಕರಣದಲ್ಲಿ ಬಂಧಿತನಾಗುತ್ತಿರುವ ನಾಲ್ಕನೇ ಪೆಡ್ಲರ್ ಈತ ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಪೇಜ್ -3 ಪಾರ್ಟಿಗಳಿಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ. ಪ್ರಕರಣ ಬೆಳಕಿಗೆ ಬರುತ್ತಿದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಸೈಮನ್ ಮತ್ತು ಲೂಪ್ ಪೆಪ್ಪರ್ ಬಂಧನದಿಂದ ಆರೋಪಿಗಳ ಸುಳಿವು ಲಭ್ಯ ವಾಗಿತ್ತು. ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ತನಿಖಾ ಸಂಸ್ಥೆಗಳ ಅವಸ್ಥೆ ! ; ವಿಶೇಷ ಟೀಂಗಳಿಗೆ ನೂರೆಂಟು ಕಷ್ಟ
ಈಗಾಗಲೇ ಕನ್ನಡ ಚಿತ್ರರಂಗಕ್ಕೆ ಮಾದಕ ದ್ರವ್ಯ ಜಾಲದ ನಂಟು ಮತ್ತು ಪೇಜ್ 3 ಪಾರ್ಟಿ ಗಳಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ 14 ಕ್ಕೂ ಅಧಿಕ ಆರೋಪಿಗಳನ್ನು‌ ಬಂಧಿಸಲಾಗಿದೆ. ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ, ಪೇಜ್ 3 ಪಾರ್ಟಿ ಆಯೋಜಕರಾದ ವಿರೇನ್ ಖನ್ನಾ, ರಾಹುಲ್ ತೋನ್ಸೆ, ಆರ್ ಟಿಒ ನೌಕರ ರವಿಶಂಕರ್ ಸೇರಿದಂತೆ ಇತರರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಇಬ್ಬರು ಎಲ್​ಇಟಿ ಉಗ್ರರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 17 =
Remember me
