
ಬೆಂಗಳೂರು:ಬಿಬಿಎಂಪಿ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ತಡೆಯಲು ವಿಶೇಷ ಪೊಲೀಸ್ ಆಯುಕ್ತಾಲಯ ಸ್ಥಾಪಿಸಬೇಕು ಎನ್ನುವ ಒತ್ತಾಯಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಕ್ರಮಕ್ಕಾಗಿ ಡಿಜಿ ಮತ್ತು ಐಜಿಪಿಗೆ ಪತ್ರ ಬರೆದಿದ್ದರೂ, ಅಧಿಕಾರಿಗಳು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಗಳಿಗಿರುವ ಸ್ಪಂಧನೆ ಮೇಲ್ಮಟ್ಟದ ಅಧಿಕಾರಿಗಳಿಗಿಲ್ಲದಿರುವುದು ನೋವಿನ ಸಂಗತಿ ಎಂದರು.ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿರುವ ಉತ್ತರದಲ್ಲಿಯೇ ಅತಿ ಹೆಚ್ಚು ಡ್ರಗ್ಸ್ ಪ್ರಕರಣ ವರದಿಯಾಗಿರುವುದು ಬೆಂಗಳೂರಿನಲ್ಲಿ ಎನ್ನುವ ಮಾಹಿತಿ ಇದೆ. ವಿಷಯ ಇಷ್ಟು ಗಂಭೀರವಾಗಿದ್ದರೂ, ಪೊಲೀಸ್ ಇಲಾಖೆ ಇದರ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ ಎಂದರು. ತಮ್ಮ ಪತ್ರದ ಮೇಲೆ ಸಿಎಂ ಲಿಖಿತವಾಗಿ ಸೂಚನೆ ನೀಡಿದ್ದರೂ, ಆ ಪತ್ರಕ್ಕೆ ಸರಿಯಾದ ಕ್ರಮ ಕೈಗೊಳ್ಳದೆ, ಜೆ.ಜೆ.ನಗರ ಪೊಲೀಸ್ ಇನ್‌ಸ್ೆಕ್ಟರ್ ಕಡೆಯಿಂದ ಹಿಂಬರಹ ಕೊಡಿಸಲಾಗಿದೆ. ಪೊಲೀಸ್ ಮೇಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ದೂರಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 14 =
Remember me
