ಚಾಮರಾಜನಗರ:ಐಸ್ ಕ್ರೀಂ​ಗೆ ಡ್ರಗ್ಸ್ ಸವರಿ ವಿದ್ಯಾರ್ಥಿಗಳಿಗೆ ಕೊಡುವ ಗುಮಾನಿ‌ ಇದೆ ಎಂದು ಸಚಿವ ಸುರೇಶ್ ಕುಮಾರ್ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಶ್ರೀಮಂತರ ಮಕ್ಕಳು ಓದುವ ಶಾಲೆಗಳಲ್ಲಿ ತಿನ್ನುವ ಐಸ್ ಕ್ರೀಂ​ಗೆ ಡ್ರಗ್ಸ್ ಸವರಿ ಕೊಡುವ ಅನುಮಾನ ಇದೆ. ಡ್ರಗ್ಸ್​ ವಿಚಾರದಲ್ಲಿ ರಾಜಿ ಇಲ್ಲ. ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಐಸ್​ ಕ್ರೀಂಗೂ ಡ್ರಗ್ಸ್​ ಸವರಿ ಕೊಡುವ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಶಂಕೆ ವ್ಯಕ್ತಪಡಿಸಿರುವುದು ಪಾಲಕರಲ್ಲಿ ಕಳವಳ ಹೆಚ್ಚಿಸಿದೆ.ಇದನ್ನೂ ಓದಿರಿಡ್ರಗ್ಸ್ ಮಾಫಿಯಾ ಕಾರಣಕ್ಕೆ ಬೆಂಗಳೂರು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ ಟೆನ್ಷನ್!
ಯುವ ಜನತೆಯನ್ನ ಹಾಳು ಮಾಡುವವರನ್ನು ಹಿಡಿದು ಜೈಲಿಗೆ ಕಳುಹಿಸುತ್ತೇವೆ. ಡ್ರಗ್ಸ್ ವಿಚಾರವಾಗಿ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಈ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದ ಸುರೇಶ್​ ಕುಮಾರ್​, ಡ್ರಗ್ಸ್ ಮಾಫಿಯಾವು ಸಮಾಜ ಹಾಗೂ ಯುವ ಜನಾಂಗವನ್ನು ದುರ್ಬಲ ಮಾಡಲು ಪ್ರಯತ್ನಿಸುತ್ತಿದೆ. ಇದನ್ನು ಬೇರು ಸಮೇತವಾಗಿ ಕಿತ್ತು ಹಾಕಬೇಕು. ಡ್ರಗ್ಸ್​ಗೆ ಯುವ ಜನತೆ ಬಲಿಯಾಗುವುದನ್ನು ಸಮಾಜ ಸಹಿಸುವುದಿಲ್ಲ. ಮೂರು ವರ್ಷದ ಹಿಂದೆಯೇ ಈ ಬಗ್ಗೆ ಬಿಜೆಪಿ ಧ್ವನಿ ಎತ್ತಿದೆ‌ ಎಂದು ತಿಳಿಸಿದರು.
ನಟಿ ರಾಗಿಣಿ ಆಪ್ತ ರವಿಶಂಕರ್​ನ ಐಷಾರಾಮಿ ಜೀವನಕ್ಕೆ ಸಿಸಿಬಿ ಪೊಲೀಸರೇ ದಂಗು

ರೈತನ ಜಮೀನು ಪಡೆದು ಬರೋಬ್ಬರಿ ನಾಲ್ಕೂವರೆ ಎಕರೆಯಲ್ಲಿ ಗಾಂಜಾ ಬೆಳೆದ ದುಷ್ಕರ್ಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
