ಬೆಂಗಳೂರು:ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟಿರುವ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಎನ್​ಸಿಬಿ ಅಧಿಕಾರಿಗಳು ಮುಂಬೈ ಮತ್ತು ದೆಹಲಿಯಲ್ಲಿ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಬ್ಬ ಡ್ರಗ್ ಪೆಡ್ಲರ್​ನನ್ನು ಬಂಧಿಸಿದ್ದು, ವಿದೇಶದಿಂದ ಬರುತ್ತಿದ್ದ ಡ್ರಗ್ಸ್ ಬೆಂಗಳೂರಿನ (ಪೇಜ್ 3) ಸೆಲೆಬ್ರಿಟಿಗಳಿಗೆ ಪೂರೈಕೆಯಾಗುತ್ತಿತ್ತು ಎಂಬ ಸ್ಪೋಟಕ ಸಂಗತಿ ವಿಚಾರಣೆಯಲ್ಲಿ ಬಯಲಾಗಿದೆ.
ಯುಎಸ್​ಎ ಮತ್ತು ಕೆನಡಾದಿಂದ ಕಳ್ಳ ಸಾಗಣೆಯಾಗಿದ್ದ 3.5 ಕೆ.ಜಿ ಗಾಂಜಾ (ಕ್ಯುರೇಟೆಡ್ ಮರಿಜುವಾನಾ)ವನ್ನು ಜಪ್ತಿ ಮಾಡಲಾಗಿದೆ. ಈ ಗಾಂಜಾಗೆ ಮುಂಬೈನಲ್ಲಿ ಭಾರಿ ಪ್ರಮಾಣದಲ್ಲಿ ಬೇಡಿಕೆ ಇದೆ. ಖಚಿತ ಮಾಹಿತಿ ಮೇರೆಗೆ ವಿದೇಶಿ ಅಂಚೆ ಕಚೇರಿಗಳಲ್ಲಿ ಮಾಲನ್ನು ಜಪ್ತಿ ಮಾಡಲಾಗಿದೆ. ಡಾರ್ಕ್​ನೆಟ್ ವೆಬ್​ಸೈಟ್ ಮೂಲಕ ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ ಖರೀದಿಸಲಾಗಿದೆ ಎಂದು ಎನ್​ಸಿಬಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಬೈನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗೋವಾದ ಎಫ್. ಅಹಮದ್ ಎಂಬಾತನನ್ನು ಬಂಧಿಸಲಾಗಿದೆ. ಈತ ಗೋವಾದ ರೆಸಾರ್ಟ್​ವೊಂದರಲ್ಲಿ ಕಾರು ಚಾಲಕನಾಗಿದ್ದಾನೆ. ಈತ ಬೆಂಗಳೂರಿನಲ್ಲಿರುವ ಡ್ರಗ್ ಪೆಡ್ಲರ್​ಗೆ ಮಾದಕ ದ್ರವ್ಯ ಪೂರೈಸುತ್ತಿದ್ದ. ಅಹಮದ್​ನಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ಪೆಡ್ಲರ್​ಗೆ ಬೆಂಗಳೂರಿನಲ್ಲಿರುವ ಹಲವು ಸೆಲೆಬ್ರೆಟಿಗಳ ಸಂಪರ್ಕವಿರುವುದು ಗೊತ್ತಾಗಿದೆ. ಆತ ಅವರಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಎಂಬ ವಿಚಾರ ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಬೈನಲ್ಲಿ ಹೆಚ್ಚು ಬೇಡಿಕೆ ಇದ್ದು, ಒಂದು ಗ್ರಾಂ ಗಾಂಜಾ 5 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದರು. 3.50 ಕೆ.ಜಿ ಗಾಂಜಾದ ಮೌಲ್ಯ 1.75 ಕೋಟಿ ರೂ.ಗೂ ಹೆಚ್ಚು ಬೆಲೆ ಬಾಳುತ್ತದೆ ಎಂದು ಎನ್​ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಸಿಸಿಬಿಗೆ ಯಾವುದೇ ಸಾಕ್ಷ್ಯ ಕೊಡದ ಇಂದ್ರಜಿತ್ ಲಂಕೇಶ್
ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್ ಮಾಫಿಯಾ ಕುರಿತು ಮಾಹಿತಿ ಸ್ಪೋಟಿಸುವುದಾಗಿ ಹೇಳುತ್ತಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿಸಿಬಿಗೆ ಯಾವುದೇ ಪುರಾವೆ ನೀಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ. ಆರೋಪಗಳಿಗೆ ಸೂಕ್ತ ಪುರಾವೆಗಳ ಸಮೇತ ಹಾಜರಾಗುವಂತೆ ಇಂದ್ರಜಿತ್​ಗೆ ಮತ್ತೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 4 =
Remember me
