ಬೆಂಗಳೂರು:ರಾಜ್ಯದಲ್ಲಿ ಡ್ರಗ್ಸ್​ ಮಾಫಿಯಾ ಭಾರೀ ಸದ್ದು ಮಾಡುತ್ತಿದ್ದು, ರಾಜಕೀಯ ಮೇಲಾಟವೂ ಬಿರುಸುಗೊಂಡಿದೆ. ಹಾಗೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ- ಸಚಿವ ಸಿ.ಟಿ. ರವಿ ನಡುವೆ ಮಾತಿನ (ಮತ್ತಿನ ವಿಚಾರ) ತೇಲಾಟ ಜೋರಾಗಿದೆ.
‘ಸಿ.ಟಿ.ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು’ ಎಂದು ಎಚ್ಚರಿಕೆ ಕೊಟ್ಟಿರುವ ಕುಮಾರಸ್ವಾಮಿ, ‘ಕ್ರಿಕೆಟ್ ಬೆಟ್ಟಿಂಗ್, ಡ್ರಗ್ಸ್ ಮಾಫಿಯಾದ ಹಣ ಬಳಸಿಕೊಂಡೇ ಮೈತ್ರಿ ಸರ್ಕಾರದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ’ ಎಂದು ಸಿ.ಟಿ. ರವಿಗೆ ಟಾಂಗ್​ ಕೊಟ್ಟಿದ್ದಾರೆ. ‘ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ’ ಎಂದು ಸರಣಿ ಟ್ವೀಟ್​ ಮೂಲಕ ಸಿ.ಟಿ. ರವಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.ಇದನ್ನೂ ಓದಿರಿಕೆಪಿಸಿಸಿ ಕಚೇರಿಗೆ ಅರಮನೆ ಟಚ್​, ವಾಸ್ತುದೋಷ ರಿಪೇರಿಗೆ ಬಾಗಿಲನ್ನೇ ಬದಲಿಸಿದ ಡಿಕೆಶಿ
ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಸೋಮವಾರ ಮಾತನಾಡಿದ್ದ ಎಚ್​ಡಿಕೆ, ‘ಡ್ರಗ್ಸ್‌ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನ ಆಯ್ತು’ ಎಂದು ಆರೋಪಿಸಿದ್ದರು. ಈ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ ರವಿ, ‘ಈ ರೀತಿಯಲ್ಲಿ ಕುಮಾರಸ್ವಾಮಿ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಅವರನ್ನು ಪರೀಕ್ಷೆಗೆ ಒಳಪಡಿಸಬೇಕಾದ ಅಗತ್ಯ ಇದೆ. ಅವರು ಸಹಜ ಸ್ಥಿತಿಯಲ್ಲಿ ಹೇಳಿದ್ದಾರೋ ಅಥವಾ ಮತ್ತಿನಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೋ?’ ಎಂದು ಲೇವಡಿ ಮಾಡಿದ್ದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು.2/8
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)September 1, 2020

ಸಿ.ಟಿ. ರವಿ ಹೇಳಿಕೆಗೆ ಕೆಂಡಾಮಂಡಲವಾದ ಎಚ್​ಡಿಕೆ, ‘ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು’ ಎಂದು ಟ್ವೀಟ್​ ಮಾಡಿದ್ದಾರೆ. ‘ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು’ ಎಂದು ಟೀಕಿಸಿದ ಎಚ್​ಡಿಕೆ, ‘ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ’ ಎಂದು ವಾರ್ನಿಂಗ್ ಕೊಟ್ಟಿದ್ದಾರೆ.
ರಂಗೇರೇತ್ತಿದೆ ಹಳ್ಳಿ ಫೈಟ್​, ಗ್ರಾಪಂ ಚುನಾವಣೆ ಯಾವಾಗ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + fourteen =
Remember me
