ಬೆಂಗಳೂರು:ಮೈತ್ರಿ ಸರ್ಕಾರಕ್ಕೆ ಡ್ರಗ್ಸ್ ಮಾಫಿಯಾ ಮುಳುವಾಯಿತು ಎಂದು ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿಯವರ ವಿರುದ್ಧ ಬಿಜೆಪಿ ನಾಯಕರು ಒಬ್ಬರ ಬೆನ್ನಿಗೆ ಮತ್ತೊಬ್ಬರಂತೆ ವಾಗ್ದಾಳಿ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್​, ಮೈತ್ರಿ ಸರ್ಕಾರದ ನಶೆಯಿಂದ ಹೊರಬರಲು ಕುಮಾರಸ್ವಾಮಿಗೆ ಒಂದು ವರ್ಷ ಬೇಕಾಯಿತೇ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೆ ಕುಮಾರಸ್ವಾಮಿ ಆಗಾಗ್ಗೆ ಊಸರವಳ್ಳಿಯಂತೆ ಬಣ್ಣ ಬದಲಿಸುತ್ತಾರೆ ಎಂದೂ ಹೇಳಿದ್ದಾರೆ.
ಬಿ.ಸಿ.ಪಾಟೀಲ್​ ಅವರ ಈ ವ್ಯಂಗ್ಯಕ್ಕೆ ಜೆಡಿಎಸ್​ ಮಾಜಿ ಶಾಸಕ ಸಾ. ರಾ. ಮಹೇಶ್​ ಪ್ರತಿಕ್ರಿಯೆ ನೀಡಿದ್ದು, ಬಿ.ಸಿ. ಪಾಟೀಲ್ ನಿಜವಾದ ಉಸರವಳ್ಳಿ ಡ್ರಗ್ಸ್ ಮಾಫಿಯಾ ವಿರುದ್ಧ ಮೊದಲು ಧ್ವನಿ ಎತ್ತಿದ್ದೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಜತೆಗೆ ಅಂತರಂಗ -ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕನಲಿ ಹೋಗಿರುವ ಬಿ.ಸಿ.ಪಾಟೀಲ್ ಬಾಲಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟಿದ್ದಾರೆ.ಇದನ್ನೂ ಓದಿ:VIDEO: ಸರ್ಫಿಂಗ್​ ಆಡಲು ಹೋಗಿದ್ದ ಕರೊನಾ ಸೋಂಕಿತಳನ್ನು ಬೆನ್ನಟ್ಟಿದ ಪೊಲೀಸರು; ಆಕೆ ಮಾಡಿದ್ದೇನು?
ಪೂರ್ವಾಶ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಇದ್ದ ಪಾಟೀಲರಿಗೆ ಇಂತಹ ಮಾಫಿಯಾಗಳ ಬಗ್ಗೆ ಅರಿವಿಲ್ಲ ಎಂದರೆ ಅವರು ಪಾಲಿಸಿದ ವೃತ್ತಿನಿಷ್ಠೆ ಏನೆಂಬುದು ನಗೆಪಾಟಲಿನ ಸಂಗತಿ. ಇಂಥ ಊಸರವಳ್ಳಿಗಳೆಲ್ಲ ಪೊಲೀಸ್​ ಇಲಾಖೆಯಲ್ಲಿ ಇದ್ದರಲ್ಲ ಎಂಬುದಕ್ಕೆ ಮರುಕವುಂಟಾಗುತ್ತಿದೆ ಕುಟುಕಿದ್ದಾರೆ.
ಸೆಪ್ಟೆಂಬರ್​ 21ರಿಂದ ಶಾಲೆಗಳು ಭಾಗಶಃ ಪ್ರಾರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
