ಮಂಗಳೂರು:ಮಾದಕ ವಸ್ತು ಸೇವನೆ ಹಾಗೂ ಸಾಗಾಟ ಆರೋಪದ ಮೇಲೆ ಬಂಧಿತನಾಗಿರುವ ಕೊರಿಯೋಗ್ರಾಫರ್ ಮತ್ತು ಡ್ಯಾನ್ಸರ್ ಕಿಶೋರ್ ಅಮನ್ ಜತೆ ಸಂಪರ್ಕದಲ್ಲಿದ್ದ ಇಬ್ಬರು ಯುವತಿಯರನ್ನು ಸಿಸಿಬಿ ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.
ಈ ಪೈಕಿ ಓರ್ವ ಯುವತಿಯನ್ನು ರಕ್ತದ ಮಾದರಿ ತಪಾಸಣೆಗೆ ಒಳಪಡಿಸಿದಾಗ ಡ್ರಗ್ಸ್ ಸೇವನೆ ಮಾಡಿರುವ ಕುರಿತಂತೆ ಪಾಸಿಟಿವ್ ಹಾಗೂ ಇನ್ನೋರ್ವ ಯುವತಿಗೆ ನೆಗೆಟಿವ್ ವರದಿ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಯುವತಿಯರು ಈ ಇಬ್ಬರನ್ನು ಹೊರತುಪಡಿಸಿದಂತೆ ಯಾರ‌ ಯಾರ ಜತೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿಗಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಚಲನಚಲನಗಳ ಮೇಲೆ ನಿಗಾ ಇಡಲಾಗುತ್ತಿದೆ.
ಇದನ್ನೂ ಓದಿ:ಟಿಕ್​ಟಾಕ್​ ಡೀಲ್​ಗೆ ಟ್ರಂಪ್​ ಷರತ್ತು, ಪೂರ್ತಿ ಅವರಿಬ್ಬರ ಕಂಟ್ರೋಲ್​ನಲ್ಲಿದ್ರೆ ಮಾತ್ರ ಓಕೆ!
ಈಗಾಗಲೇ ಬಂಧಿತರಾಗಿರುವ ಕಿಶೋರ್ ಹಾಗೂ ಅಕೀಲ್ ನೌಶಾಲ್ ಕರೊನಾ ಟೆಸ್ಟ್ ವರದಿ ಸೋಮವಾರ ಲಭ್ಯವಾಗಿಲ್ಲ. ಈ ನಡುವೆ ಪೊಲೀಸರು ಇಬ್ಬರ ಮುಂಬೈ ಹಾಗೂ ಬೆಂಗಳೂರು ನಂಟಿನ ಕುರಿತಂತೆ ಇನ್ನಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ತಲೆಮರೆಸಿಕೊಂಡಿರುವ ಆದಿತ್ಯ ಆಳ್ವ ಹುಡುಕಾಟಕ್ಕೆ ಲುಕ್​ಔಟ್​ ನೋಟಿಸ್​ ಜಾರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × three =
Remember me
