ಹುಬ್ಬಳ್ಳಿ:ಡ್ರಗ್ಸ್‌ ಕೇಸ್​ನಲ್ಲಿ ಸ್ಯಾಂಡಲ್‌ವುಡ್​ ನಂಟಿನ ಪ್ರಕರಣದಲ್ಲಿ ದಿನಕ್ಕೆ ಒಬ್ಬಿಬ್ಬರ ಹೊಸ ಹೆಸರುಗಳು ಬಯಲಾಗುತ್ತಲೇ ಇವೆ. ಬೆಂಗಳೂರಿನಲ್ಲಿ ನಟಿಯರಿಬ್ಬರನ್ನು ವಿಚಾರಣೆ ನಡೆಸುತ್ತಿರೋ ಸಿಸಿಬಿ ಪೊಲೀಸರು ಇದೀಗ ವಾಣಿಜ್ಯ ನಗರಿ ಮೇಲೂ ಕಣ್ಣಿಟ್ಟಿದ್ದಾರೆ.
ನಟಿ ರಾಗಿಣಿ ಮೊಬೈಲ್‌ನಲ್ಲಿ ಮಾಜಿ ಸಚಿವರೊಬ್ಬರ ಆಪ್ತನೆಂದೇ ಗುರುತಿಸಿಕೊಂಡಿರುವ ಕಾಂಗ್ರೆಸ್​ ಮುಖಂಡ ಗಿರೀಶ್ ಗದಿಗೆಪ್ಪಗೌಡರ ಫೋಟೋ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಗಿರೀಶ್​ ಗದಿಗೆಪ್ಪಗೌಡರ ಅವರನ್ನು ವಶಕ್ಕೆ ಪಡೆದ ಸಿಸಿಬಿ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ‘ಮಾದಕ’ ನಟಿ ರಾಗಿಣಿ ದ್ವಿವೇದಿಗೆ ಹುಬ್ಬಳಿಯ ನಂಟಿದ್ಯಾ? ಎಂಬುದು ಬಯಲಾಗಲಿದೆ.ಇದನ್ನೂ ಓದಿರಿಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​
ಈ ಹಿಂದೆ ನಟಿ ರಾಗಿಣಿ ಜೊತೆ ತೆಗೆಸಿಕೊಂಡಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಗಿರೀಶ್ ಗದಿಗೆಪ್ಪಗೌಡರ ಅಪ್ಲೋಡ್ ಮಾಡಿದ್ದರು. ರಾಗಿಣಿ ಜೊತೆ ಗಿರೀಶ್​ ಗೋವಾಕ್ಕೂ ತೆರಳಿದ್ದರು ಎನ್ನಲಾಗಿದೆ. ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ಬಂಧನವಾಗುತ್ತಿದ್ದಂತೆ ಆ ಎಲ್ಲ ಫೋಟೋಗಳನ್ನು ಗಿರೀಶ್ ಡಿಲೀಟ್​ ಮಾಡಿದ್ದಾರೆ. ಆದರೆ ರಾಗಿಣಿ ಮೊಬೈಲ್​ನಲ್ಲಿ ಇವರ ಫೋಟೋ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಗಿರೀಶ್​ರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜಮೀರ್ ಹೇಳಿಕೆ ಬೆನ್ನಲ್ಲೇ ಶ್ರೀಲಂಕಾ ಪ್ರವಾಸದ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ!

‘ನಂಗೆ ಸಂಜನಾನೂ ಗೊತ್ತಿಲ್ಲ, ರಾಗಿಣಿನೂ ಗೊತ್ತಿಲ್ಲ… ಗೊತ್ತಿರೋದು ನನ್ನ ಹೆಂಡ್ತಿ ಮಾತ್ರ’

ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
