ಬೆಂಗಳೂರು:ಈ ಹಿಂದೆ ಜೆಡಿಎಸ್​ನ 26 ಶಾಸಕರು ಎಚ್​.ಡಿ.ಕುಮಾರಸ್ವಾಮಿ ಸಹಿತ ಕೊಲಂಬೋಗೆ ಹೋಗಿದ್ವಿ ಎಂದ ಜಮೀರ್ ಅಹ್ಮದ್ ಹೇಳಿಕೆಗೆ ಮಾಜಿ ಸಿಎಂ ಎಚ್​ಡಿಕೆ ಟ್ವೀಟ್​ ಮೂಲಕ ತಿರುಗೇಟು ನೀಡಿದ್ದಾರೆ.
ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ‘ಕೊಲಂಬೋ ಯಾತ್ರೆ’ ಮಾಡಿರಲಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿರಿ‘ಡ್ರಗ್ಸ್ ದಂಧೆಯಲ್ಲಿ ಜಮೀರ್ ಅಹ್ಮದ್ ಪಾತ್ರ ನೂರರಷ್ಟಿದೆ’, ಆದ್ರೂ ಅರೆಸ್ಟ್​ ಮಾಡ್ತಿಲ್ಲ ಏಕೆ?
ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ‘ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ’ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ. 2014 ರ ಜೂನ್​ನಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದೆವು. ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ’ ಎಂದಿರುವ ಎಚ್​ಡಿಕೆ, ವಿಮಾನ ಹತ್ತುವಾಗಲೂ ಮತ್ತು ವಾಪಸ್​ ಬಂದಾಗಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೇ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೇ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.
ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ ಎಂದಿದ್ದಾರೆ.
ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ.1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)September 12, 2020

‘ಡ್ರಗ್ಸ್​ ದಂಧೆಯಲ್ಲಿ 32 ರಾಜಕಾರಣಿಗಳು! ಸಾಕ್ಷಿ ಸಮೇತ ಗೃಹ ಸಚಿವರ ಕೈ ಸೇರಲಿದೆ ಲಿಸ್ಟ್’

ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

ಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 9 =
Remember me
