ದಾವಣಗೆರೆ:ಸರ್ಕಾರಿ ಶಾಲೆಯಲ್ಲಿ ಮದ್ಯದ ಬಾಟಲಿ ಎಂದರೆ ಏನಪ್ಪಾ ಇದು ಎಂದು ಎನಿಸದೇ ಇರುವುದಿಲ್ಲ. ಶಿಕ್ಷಕರ ವರ್ತನೆಯ ಬಗ್ಗೆ ಕಠಿಣ ನಿಯಮಗಳನ್ನು ಹೊಂದಿರುವ ಸರ್ಕಾರಿ ಶಾಲೆಯಲ್ಲಿ ಮದ್ಯದ ಬಾಟಲಿಗಳ ರಾಶಿ ಪತ್ತೆಯಾಗಿದ್ದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೀಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಬಗ್ಗೆ ಈಗ ಹೇಳೋರು ಕೇಳೋರು ಯಾರೂ ಇಲ್ಲದಂತೆ ಆಗಿದೆ. ಶಾಲಾ ಆವರಣವನ್ನು ಸ್ವಚ್ಛ ಮಾಡುತ್ತಿದ್ದ ಯುವ ಬ್ರಿಗೇಡ್​ಗೆ ಸಾವಿರಾರು ಮದ್ಯದ ಬಾಟಲಿಗಳು ಪತ್ತೆಯಾಗಿದ್ದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ಈಗ ಈ ಸರ್ಕಾರಿ ಶಾಲೆಯ ಬಗ್ಗೆ ಹೇಳೋರು ಕೇಳೋರು ಯಾರೂ ಇಲ್ಲದಂತಾಗಿದೆ. ಸಾವಿರಾರು ಮದ್ಯದ ಬಾಟಲಿಗಳನನ್ನು ಕಂಡು ಯುವ ಬ್ರಿಗೇಡ್ ಕಾರ್ಯಕರ್ತರು ದಂಗಾಗಿದ್ದಾರೆ. ರಾತ್ರಿ ವೇಳೆ ಕುಡುಕರು ಕುಡಿದು ಆವರಣದಲ್ಲಿಯೇ ಬಾಟಲಿ ಬೀಸಾಡಿ ಹೋಗುತ್ತಿದ್ದಾರೆ. ಈ ಬಗ್ಗೆ ಮಕ್ಕಳು ಶಾಲಾ ಆವರಣದಲ್ಲಿ ಬಾಟಲಿಗಳನ್ನು ಬಿಸಾಡಬೇಡಿ ಮನವಿ ಕೂಡ ಮಾಡಿದ್ದಾರೆ.
ನಡೆಯುತ್ತಿರುವ ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಯುವ ಬ್ರಿಗೇಡ್ ಕಾರ್ಯಕರ್ತರ ಒತ್ತಾಯ ಮಾಡುತ್ತಿದ್ದಾರೆ. ಈಗ ಯುವ ಬ್ರಿಗೇಡ್​ನ ಕಾರ್ಯಕರ್ತರು ಶಾಲಾ ಆವರಣದಲ್ಲಿದ್ದ ಮದ್ಯದ ಬಾಟಲಿಗಳನ್ನು ಜನ ಸಂಚಾರವಿಲ್ಲದ ಸ್ಥಳಕ್ಕೆ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
