ನೆಲಮಂಗಲ:ಸಾರ್ವಜನಿಕರು ಮದ್ಯಪಾನ ಮಾಡಿಕೊಂಡು ವಾಹನ ಚಲಾಯಿಸಿದರೆ ತಡೆದು ಪ್ರಕರಣ ದಾಖಲಿಸಿಕೊಳ್ಳುವ ಪೊಲೀಸರೇ ಪಾನಮತ್ತರಾಗಿ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಪ್ರಕರಣವೊಂದು ನಡೆದಿದೆ.
ಬೆಂಗಳೂರು ಉತ್ತರ ತಾಲ್ಲೂಕು ಮಾದನಾಯಕನಹಳ್ಳಿ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ರಾಜಗೋಪಾಲನಗರ ಠಾಣೆಯ ಸಬ್​ ಇನ್​ಸ್ಪೆಕ್ಟರ್​ ಸಂಜೀವಯ್ಯ (58) ಮದ್ಯ ಸೇವಿಸಿ ಅಪಘಾತ ಎಸಗಿದ ಪೊಲೀಸ್.
ಪೊಲೀಸ್ ಇಲಾಖೆಗೆ ಸೇರಿದ್ದ ಬೊಲೆರೊ ವಾಹನವನ್ನು ಈ ಎಸ್​ಐ ಮದ್ಯದ ಅಮಲಿನಲ್ಲಿ ಚಲಾಯಿಸಿದ್ದು, ನಿಯಂತ್ರಣ ತಪ್ಪಿದ ವಾಹನ ರಸ್ತೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಳಿಕ ಇನ್ನೋವಾ ಕಾರಿಗೂ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ವಾಹನಗಳು ಜಖಂಗೊಂಡಿವೆ.
ಪೊಲೀಸ್ ವಾಹನದಲ್ಲಿ ಮದ್ಯದ ಬಾಟಲಿ ಹಾಗೂ ಬಾಡೂಟವಿದ್ದು, ಸಂಜೀವಯ್ಯ ತಲೆಗೂ ಗಾಯವಾಗಿದೆ. ಅದರೆ ಅಪಘಾತದ ಬಳಿಕ ಅವರು ಪರಾರಿಯಾಗಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಧ್ಯರಾತ್ರಿಯಲ್ಲಿ ಓಡೋ ಹುಡುಗ.. ಪರೀಕ್ಷೆಗೂ ಮೊದಲೇ ಸೇನಾಧಿಕಾರಿಯ ಮನಗೆದ್ದ..!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 5 =
Remember me
