ರಾಮನಗರ:ಪಾನಮತ್ತ ವ್ಯಕ್ತಿಯೊಬ್ಬ ತನ್ನ ನಾಲ್ಕನೆಯ ಪತ್ನಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ವಿಚಿತ್ರವೆಂದರೆ ಈತ ತನ್ನ ಎರಡನೇ ಪತ್ನಿಯನ್ನೂ ಇದೇ ರೀತಿ ಕೊಂದು ಹಾಕಿದ್ದ. ರಾಮನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆಯ ಅವರೇಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೋರಯ್ಯ ಬಂಧಿತ ಆರೋಪಿ. ಈತನ ಪತ್ನಿ ಭದ್ರಮ್ಮ ಕೊಲೆಯಾದ ಮಹಿಳೆ. ಗಂಡ-ಹೆಂಡತಿ ಇಬ್ಬರೂ ಮಾವಿನತೋಟದಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಕುಡಿದು ಗಲಾಟೆ ಮಾಡಿಕೊಂಡಿದ್ದರು. ಆಗ ಪಾನಮತ್ತ ಪತಿ ಕಟ್ಟಿಗೆಯಿಂದ ಆಕೆಗೆ ಹೊಡೆದಿದ್ದು, ಅವಳು ಸಾವಿಗೀಡಾಗಿದ್ದಾಳೆ.
ಬೋರಯ್ಯನಿಗೆ ಭದ್ರಮ್ಮ ನಾಲ್ಕನೆಯ ಹೆಂಡತಿಯಾಗಿದ್ದು,ಈತ ಎರಡನೆಯ ಯನ್ನು 2014ರಲ್ಲಿ ಕನಕಪುರದಲ್ಲಿ ಇದೇ ರೀತಿ ಕಟ್ಟಿಗೆಯಿಂದ ಬಡಿದು ಕೊಲೆ ಮಾಡಿದ್ದ. ನಂತರ ಜಾಮೀನಿನ‌ ಮೇಲೆ ಹೊರಬಂದು ಭದ್ರಮ್ಮಳನ್ನು ಮದುವೆಯಾಗಿದ್ದನು. ಪತ್ನಿಯನ್ನು ಹತ್ಯೆ ಮಾಡಿದ ಆರೋಪ ಮೇರೆಗೆ ಬೋರಯ್ಯನನ್ನು ರಾಮನಗರ ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಡಿಸಿದ್ದಾರೆ.
ಶಬರಿಮಲೆ ಯಾತ್ರಾರ್ಥಿಗಳ ಗಮನಕ್ಕೆ: 2 ವಾರಕ್ಕೆ ಮೊದಲು ಹೀಗೆ ಮಾಡಿ; ಆರೋಗ್ಯ ಇಲಾಖೆಯಿಂದ ಮಹತ್ವದ ಸಲಹೆ

ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ; ವಸತಿ ನಿಲಯದಲ್ಲೇ ಸಾವು..

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:two × four =
Remember me
