ಮಂಡ್ಯ:ಮಳವಳ್ಳಿ ತಾಲೂಕು ನಂಜೇಗೌಡನದೊಡ್ಡಿ ಗ್ರಾಮದ ದಲಿತ ಯುವತಿ ಮೇಘಶ್ರೀಯನ್ನು ಮಾರ್ಯಾದೆ ಹತ್ಯೆ ಮಾಡಲಾಗಿದ್ದು, ಈ ಬಗ್ಗೆ ಸರಿಯಾದ ತನಿಖೆ ನಡೆಸಿದ ಶ್ರೀರಂಗಪಟ್ಟಣ ಡಿವೈಎಸ್ಪಿ ಅರುಣ್ ನಾಗೇಗೌಡ ಹಾಗೂ ಸಿಪಿಐ ಪ್ರಭಾಕರ್ ಅಮಾನತು ಮಾಡಬೇಕು. ಅಂತೆಯೆ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳು ಪ್ರತಿಭಟಿಸಿದವು.ರೈತ ಸಭಾಂಗಣದ ಎದುರು ಜಮಾವಣೆಗೊಂಡ ಪ್ರತಿಭಟನಾಕಾರರು, ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಜಿಲ್ಲಾ ಎಸ್ಪಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.ಮೇಘಶ್ರೀಯನ್ನು ಪ್ರೀತಿಸಿ ಮದುವೆಯಾಗಿದ್ದ ಪಾಂಡವಪುರ ತಾಲೂಕು ತಿರುಮಲಾಪುರ ಗ್ರಾಮದ ಟಿ.ಕೆ.ಸ್ವಾಮಿ ತನ್ನ ಕುಟುಂಬದವರೊಂದಿಗೆ ಸೇರಿ ಜಾತಿಯ ಕಾರಣಕ್ಕೆ ಹತ್ಯೆ ಮಾಡಿದ್ದಾರೆ. ಈ ವಿಚಾರ ಸ್ಥಳೀಯರಿಂದ ಮೇಘಶ್ರೀ ಕುಟುಂಬದವರಿಗೆ ಗೊತ್ತಾಗಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಅರುಣ್ ನಾಗೇಗೌಡ ಮತ್ತು ಸಿಬ್ಬಂದಿ ನಿರ್ಲಕ್ಷೃತನ ತೋರುತ್ತಿದ್ದಾರೆ ಎಂದು ಆರೋಪಿಸಿದರು.ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಬೇರೆ ಅಧಿಕಾರಿ ನೇಮಿಸಬೇಕು. ಜಿಲ್ಲಾ ಎಸ್ಪಿ ಉಸ್ತುವಾರಿ ನೋಡಿಕೊಳ್ಳಬೇಕು. ಮರ್ಯಾದೆಗೇಡು ಹತ್ಯೆ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಕಾರ್ಯಕ್ರಮ ರೂಪಿಸಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಗುರುಪ್ರಸಾದ್ ಕೆರಗೋಡು, ಕೆಂಪಣ್ಣ ಸಾಗ್ಯ, ಪ್ರೊ.ಮಹದೇವು, ಕುಬೇರಪ್ಪ, ದೇವಿ, ಸುಶೀಲಾ, ಪೂರ್ಣಿಮಾ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
