ಬೆಂಗಳೂರು:ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳ ಶಾಲೆಗಳಿಗೆ ಘೋಷಿಸಲಾಗಿದ್ದ ರಜೆಯನ್ನು ಮುಂದುವರಿಸಲಾಗಿದೆ. ಆದರೆ ಒಂದು ಜಿಲ್ಲೆಯಲ್ಲಿ ನಾಳೆಯೂ ಶಾಲೆ-ಕಾಲೇಜುಗಳಿಗೆ ರಜೆ ಎಂಬ ನಕಲಿ ಆದೇಶ ಹರಿದಾಡುತ್ತಿದೆ.
ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವುದರಿಂದ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ ರಜೆ ಮುಂದುವರಿಸಲಾಗಿದೆ. ಆದರೆ ಪಿಯುಸಿ ನಂತರದ ಎಲ್ಲ ಕಾಲೇಜುಗಳಿಗೆ ನಾಳೆಯಿಂದ ತರಗತಿ ಆರಂಭವಾಗಲಿದ್ದು, ರಜೆ ಇರುವುದಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಕಳೆದ ಒಂದು ವಾರದಿಂದ ಭಾರಿ ಮಳೆ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ರಜೆ ಮುಂದುವರಿಯಲಿದೆ. ಪಿಯುಸಿ, ಪದವಿ ಮತ್ತು ಇತರ ಕಾಲೇಜುಗಳಿಗೆ ಎಂದಿನಂತೆ ತರಗತಿ ಇರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಆಗುತ್ತಿರುವುದರಿಂದ ಜು. 11ರಂದು ಜಿಲ್ಲೆಯ ಎಲ್ಲ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹತ್ತನೆ ತರಗತಿಯವರೆಗೆ ಮಾತ್ರ ರಜೆ ಅನ್ವಯಿಸುತ್ತಿದ್ದು, ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಬಿ.ಸಿ.ಸತೀಶ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು, ಆಲೂರು, ಸಕಲೇಶಪುರ ತಾಲೂಕುಗಳ ಪ್ರಾಧಮಿಕ ಮತ್ತು ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಸೋಮವಾರ ಜುಲೈ 11ರಂದು ರಜೆ ಎಂಬುದಾಗಿ ಜಿಲ್ಲಾಧಿಕಾರಿ ‌ಆರ್. ಗಿರೀಶ್ ಘೋಷಣೆ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆ ಮುನ್ಸೂಚನೆ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶ ಹೊರಡಿಸಿದ್ದಾರೆ. ಜು.8ರಿಂದ ಜು.12ರ ವರೆಗೆ‌ ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಆಗಿರುವುದರಿಂದ ಈ ರಜೆಯನ್ನು ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಎಂದು ಯಾರೋ ನಕಲಿ ಆದೇಶವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಶಾಲೆ ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿಯ ಹೆಸರಿನಲ್ಲಿ ನಕಲಿ ಆದೇಶ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಕಾನೂನುಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಜುಲೈ 11 ರಂದು ಜಿಲ್ಲೆಯ ಶೈಕ್ಷಣಿಕ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಅದಾಗ್ಯೂ ತೀರ ಅಗತ್ಯ ಕಂಡುಬಂದರೆ ಬಿಇಒ ಮತ್ತು ತಹಶೀಲ್ದಾರರಿಗೆ ರಜೆ ನೀಡುವ ತೀರ್ಮಾನ ಕೈಗೊಳ್ಳುವ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ: ಬೆಂಬಲದ ಕುರಿತು ಸದ್ಯಕ್ಕಿಷ್ಟೇ ತೀರ್ಮಾನ..
ಫುಡ್​ ಡೆಲಿವರಿ ಬಾಯ್ ಆಗಿ ಮನೆ ಮನೆಗೂ ತೆರಳಿದ ನಾಯಕ ನಟ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four + eleven =
Remember me
