ಕಲಬುರಗಿ:ಪ್ರೀತಿಗೆ ಕಣ್ಣಿಲ್ಲ, ವಯಸ್ಸು, ಜಾತಿ ಅಂತರ ಇಲ್ಲ ಎನ್ನುವುದನ್ನು ನಾವು ಕೇಳಿದ್ದೇವೆ. ಹೀಗೆ ಇಲ್ಲೊಂದು ಅಣ್ಣ-ತಂಗಿ ವರಸೆ ಇರುವ ಜೋಡಿಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ.
ಶಶಿಕಲಾ (20) ಗೊಲ್ಲಾಳಪ್ಪ ( 24) ಮೃತರು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು. ಅದರಿಂದ ಎರಡೂ ಮನೆಯವರು ಅಣ್ಣ-ತಂಗಿ ಪ್ರೀತಿಗೆ ನಿರಾಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮನನೊಂದು ಇಬ್ಬರು ಮೃತರಾಗಿದ್ದಾರೆ.
ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.
ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಮಾದಕ ನಟಿಯ ದಾಂಪತ್ಯ ಇದ್ದಿದ್ದು ಎರಡೇ ವಾರ; ಹನಿಮೂನ್‌ನಿಂದ ವಾಪಸ್​ ಬರ್ತಿದ್ದಂತೆ ಮುರಿದು ಬಿತ್ತು ಸಂಬಂಧ

ಸತ್ತೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಅಂದುಕೊಂಡಿದ್ದನ್ನು ಸಾಧಿಸಿದ ಮಾದಕ ನಟಿ; ಪೂನಂ.. ನೀನಿನ್ನು ಬದುಕಿದ್ಯಾ?ಎಂದ್ರು ಪಡ್ಡೆಹುಡುಗರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 5 =
Remember me
