ಬೆಂಗಳೂರು:ವೋಟರ್ ಐಡಿ, ಚಾಲನಾ ಪರವಾನಗಿ, ಆಧಾರ್​ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು​ ತಯಾರು ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಸಚಿವ ಭೈರತಿ ಸುರೇಶ್​ ಆಪ್ತ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಮೌನೇಶ್​ ಕುಮಾರ್, ರಾಘವೇಂದ್ರ, ಭಗತ್​ ಎಂದು ಗುರತಿಸಲಾಗಿದೆ. ಬಂಧಿತರು ಹಣ ಕೊಟ್ಟರೆ ನಕಲಿ ವೋಟರ್ ಐಡಿ, ಆಧಾರ್ ಕಾರ್ಡ್ ಹಾಗೂ ಡಿಎಲ್‍ನ್ನು ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ತೆಲಂಗಾಣವನ್ನು ಹಾಳು ಮಾಡುವಲ್ಲಿ ನಿಮ್ಮ ಕುಟುಂಬ ಮಹತ್ವದ ಪಾತ್ರ ವಹಿಸಿದೆ; ರಾಹುಲ್ ಹೇಳಿಕೆಗೆ ಕೆಸಿಆರ್ ಪುತ್ರಿ ತಿರುಗೇಟು
ಬಂಧಿತ ಆರೋಪಿಗಳು ಹೆಬ್ಬಾಳದ ಕನಕನಗರದಲ್ಲಿ ಎಂಎಸ್‍ಎಲ್ ಟೆಕ್ನೊ ಸೊಲ್ಯೂಷನ್ ಎಂಬ ಕಚೇರಿಯನ್ನು ಸಹ ನಡೆಸುತ್ತಿದ್ದರು. ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕಂಪ್ಯೂಟರ್ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿದೆ.
ಆರೋಪಿಗಳು ಯಾವುದೇ ಕ್ಷೇತ್ರದ ವೋಟರ್ ಐಡಿ, ಚಾಲನಾ ಪರವಾನಗಿ, ಆಧಾರ್​ ಕಾರ್ಡ್ ಸೇರಿದಂತೆ ನಕಲಿ ದಾಖಲೆಗಳನ್ನು​ ಕೇಳಿದರೂ ಮಾಡಿಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್​ ಠಾಣೆಯಲ್ಲಿ FIR ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eight =
Remember me
