ದಾವಣಗೆರೆ: ಜಿದ್ದಾಜಿದ್ದಿನ ಕಣವಾಗಿದ್ದ ದಾವಣಗೆರೆ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯುವಲ್ಲಿ ಭಾರತೀಯ ಜನತಾ ಪಕ್ಷ ಯಶ ಕಂಡಿದೆ.
ಒಟ್ಟು 62 ಸದಸ್ಯರಿದ್ದು, 59 ಸದಸ್ಯರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರಾದರೂ ಕೊನೆಘಳಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಚುನಾವಣೆ ಬಹಿಷ್ಕರಿಸಿದ್ದರಿಂದ ಬಿಜೆಪಿ ಗೆ ಗೆಲುವು ಅನಾಯಾಸವಾಗಿ ಲಭಿಸಿತು. ಕಾಂಗ್ರೆಸ್ ಪಕ್ಷದ ಮೂರು ಸದಸ್ಯರು ಗೈರುಹಾಜರಾಗಿದ್ದರು. ಮೇಯರ್ ಆಗಿ ಭಾರತೀಯ ಜನತಾ ಪಕ್ಷದ ಬಿ.ಜೆ.ಅಜಯ್ ಕುಮಾರ್ ಹಾಗೂ ಉಪಮೇಯರ್ ಆಗಿ ಸೌಮ್ಯ ಎಸ್.ನರೇಂದ್ರ ಕುಮಾರ್ ಗೆಲುವಿನ ನಗೆ ಬೀರಿದರು.
ಇದಕ್ಕೂ ಮುನ್ನ, ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಅಕ್ರಮ ಮಾರ್ಗ ಅನುಸರಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಚುನಾವಣೆ ಬಹಿಷ್ಕರಿಸಿದ್ದರು.ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಾದೇಶಿಕ ಆಯುಕ್ತ ಇಕ್ಕೇರಿ ಮತ್ತು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಬಿಜೆಪಿ ಏಜೆಂಟರಂತೆ ವರ್ತಿಸಿದ್ದಾರೆ ಎಂದು ಹರಿಹಾಯ್ದರು. ಕಾಂಗ್ರೆಸ್ ನ ಮೂವರು ಸದಸ್ಯರನ್ನು ಅಪಹರಿಸಲಾಗಿದೆ. ಅವರನ್ನು ಹಣ ನೀಡಿ ಖರೀದಿಸಲಾಗಿದೆ ಎಂದು ಹೇಳಿದರು
ಎಂಎಲ್ಸಿ ಎಚ್. ಎಂ. ರೇವಣ್ಣ ಮಾತನಾಡಿ ಬಿಜೆಪಿ ರಾಜ್ಯಮಟ್ಟದಲ್ಲಿ ನಡೆಸಿದ ಆಪರೇಶನ್ ಕಮಲ ಕಾರ್ಯಾಚರಣೆಯನ್ನು ದಾವಣಗೆರೆಯಲ್ಲಿ ಮುಂದುವರಿಸಿದ್ದಾರೆ ಎಂದು ದೂರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
