
ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಹುಣಸೂರು ಶಾಸಕ ಜಿ.ಡಿ. ಹರೀಶ್‌ಗೌಡ ಅವರು ಮುಂದೆ ಬಂದಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸ್ವಾಗತಿಸಿದ್ದಾರೆ.ಮೈಸೂರು ಜಿಲ್ಲೆಯ ಹುಣಸೂರಿನ ಶಾಮರಾವ್ ಮತ್ತು ಜಯಮ್ಮ ಅವರ ಪುತ್ರರಾದ ದ್ವಾರಕೀಶ್ ಅವರು ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಸೇವೆ ಸಲ್ಲಿಸುವ ಮೂಲಕ ಕಲಾ ಕ್ಷೇತ್ರದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು ಅಪಾರ ಗೌರವ ಪಡೆದಿರುವುದಲ್ಲದೆ, ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದವರು ಎನ್ನುವುದನ್ನು ಸಂಘ ಸ್ಮರಿಸಿದೆ.ಚಲನ ಚಿತ್ರ ನಾಯಕರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಸೇವೆ ಸಲ್ಲಿಸಿ ಹುಣಸೂರಿನ ಸುಪುತ್ರ ಎನ್ನುವುದರಲ್ಲಿಯೂ ಸೈ ಎನ್ನಿಸಿಕೊಂಡವರು. ಹಿರಿಯ ನಟ ದ್ವಾರಕೀಶ್ ಅವರು ಚಲನಚಿತ್ರ ಕಲಾ ಕ್ಷೇತ್ರದಲ್ಲಿ ಅಪಾರವಾದ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿ ಅವರ ಹೆಸರಿನಲ್ಲಿ ಹುಣಸೂರಿನ ಶಾಸಕ ಜಿ.ಡಿ.ಹರೀಶ್ ಗೌಡ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆ ಯು ಡ ಬ್ಲೂೃ ಜೆ)ಪ್ರಶಸ್ತಿ ಸ್ಥಾಪನೆ ಮಾಡಲು ಕ್ರಮ ಕೈಗೊಂಡಿರುವುದು ಶ್ಲಾಘನೀಯ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ದತ್ತಿನಿಧಿಗೆ 2 ಲಕ್ಷ ರೂ ಉದಾರವಾಗಿ ದೇಣಿಗೆ ನೀಡಿರುವ ಶಾಸಕ ಹರೀಶ್‌ಗೌಡ ಅವರನ್ನು ಸಂಘ ಅಭಿನಂದಿಸಿದೆ.ಸಿನಿಮಾ ರಂಗದ ಬಗ್ಗೆ ವರದಿ ಮಾಡುವ ಕ್ರೀಯಾಶೀಲ ವರದಿಗಾರರೊಬ್ಬರಿಗೆ ಪ್ರತಿ ವರ್ಷ ನಡೆಯುವ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − one =
Remember me
