ಬೆಂಗಳೂರು:ಎಲ್​ಕೆಜಿಯಿಂದ 5ನೇ ತರಗತಿಯವರೆಗೆ ರಾಜ್ಯದಲ್ಲಿ ಆನ್​ಲೈನ್ ಶಿಕ್ಷಣ ರದ್ದುಗೊಂಡ ಬೆನ್ನಲ್ಲೇ ಈ ನಿರ್ಬಂಧವನ್ನು 7ನೇ ತರಗತಿವರೆಗೂ ವಿಸ್ತರಿಸ ಬೇಕೆಂಬ ವಿಚಾರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿ ಸಚಿವದ್ವಯರ ತದ್ದಿರುದ್ಧ ಹೇಳಿಕೆಗಳಿಂದಾಗಿ ತೀವ್ರ ಗೊಂದಲ ಉಂಟಾಗಿತ್ತು. ಬಳಿಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಈ ವಿಚಾರ ಚರ್ಚೆಯ ಹಂತದಲ್ಲಿದೆಯೇ ಹೊರತು ನಿರ್ಧಾರವಾಗಿಲ್ಲ ಎಂದು ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆದರು.
ರಾಜ್ಯದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಆನ್​ಲೈನ್ ತರಗತಿ ನಡೆಸುತ್ತಿರುವ ಬಗ್ಗೆ ಪಾಲಕರು, ಶಿಕ್ಷಣ ತಜ್ಞರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವ ಸುರೇಶ್ ಕುಮಾರ್ ಬುಧವಾರ ಸಭೆ ನಡೆಸಿ ಎಲ್​ಕೆಜಿಯಿಂದ 5ನೇ ತರಗತಿಯವರೆಗೆ ಆನ್​ಲೈನ್ ಕ್ಲಾಸ್ ನಡೆಸುವುದನ್ನು ರದ್ದು ಮಾಡಿದ್ದರು. ಇದೇ ವಿಚಾರ ಗುರುವಾರ ನಡೆದ ಸಂಪುಟ ಸಭೆಯಲ್ಲೂ ಚರ್ಚೆಯಾಯಿತು. ಆನ್​ಲೈನ್ ತರಗತಿಗಳಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ತೊಂದರೆಯಾಗುತ್ತಿದೆ. ಅವರಿಗೆ ಇದರ ಲಾಭ ದೊರೆಯುವುದಿಲ್ಲ. ಈ ಹಿನ್ನೆಲೆಯಲ್ಲಿ 5ನೇ ತರಗತಿ ಬದಲಾಗಿ 7ನೇ ತರಗತಿಯವರೆಗೂ ರದ್ದು ಮಾಡಿದರೆ ಉತ್ತಮ ಎಂದು ಹಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದರೆಂದು ತಿಳಿದು ಬಂದಿದೆ. ಸಂಪುಟ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಸಂಪುಟದಲ್ಲಿ ಈ ವಿಚಾರ ಚರ್ಚೆಯಾಯಿತೆಂದರು.ಇದನ್ನೂ ಓದಿ:ಪ್ರತಿಯೊಬ್ಬ ಕಾರ್ಯಕರ್ತರಿಗೆ ಗೌರವ ಸಲ್ಲಲ್ಲಿ ; ರಾಜ್ಯಸಭಾ ಅಭ್ಯರ್ಥಿ ರಾಯಚೂರಿನ ಅಶೋಕ ಗಸ್ತಿ ಹೇಳಿಕೆ
ಆನಂತರ 7ನೇ ತರಗತಿಯವರೆಗೂ ಆನ್​ಲೈನ್ ಶಿಕ್ಷಣ ರದ್ದುಪಡಿಸುವಂತೆ ಶಿಕ್ಷಣ ಸಚಿವರಿಗೆ ಸಲಹೆ ನೀಡಿರುವುದಾಗಿ ತಿಳಿಸಿದರು. ಸಚಿವ ಮಾಧುಸ್ವಾಮಿ ಹೇಳಿಕೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಎಚ್ಚೆತ್ತ ಸಚಿವ ಸುರೇಶ್ ಕುಮಾರ್ 7ನೇ ತರಗತಿವರೆಗೂ ಆನ್​ಲೈನ್ ಶಿಕ್ಷಣ ರದ್ದುಗೊಳಿಸಬೇಕೆಂಬ ಬಗ್ಗೆ ಸಲಹೆ ಮಾತ್ರ ಬಂದಿದೆ. ಇನ್ನೂ ನಿರ್ಧಾರವಾಗಿಲ್ಲ ಎಂದರು.
ಸಂಪುಟ ಸಭೆ ನಂತರ ಅನೌಪಚಾರಿಕ ಸಭೆ ನಡೆಯುತ್ತಿತ್ತು. ಭಾರತರತ್ನ ಸಿ.ಎನ್.ಆರ್.ರಾವ್ ನನಗೆ ಕರೆ ಮಾಡಿ ಆನ್​ಲೈನ್ ಕ್ಲಾಸ್ ರದ್ದು ಮಾಡಿರುವುದಕ್ಕೆ ಅಭಿನಂದನೆ ತಿಳಿಸಿದರು. ಈ ವಿಷಯವನ್ನು ಎಲ್ಲರ ಮುಂದೆ ಪ್ರಸ್ತಾಪಿಸಿದೆ. ಅಲ್ಲಿದ್ದ ಕೆಲವು ಸಚಿವರು, ಇದೊಂದು ಉತ್ತಮವಾದ ಕೆಲಸ. ಇದನ್ನು 5 ತರಗತಿ ಬದಲಾಗಿ 7ನೇ ತರಗತಿಯವರೆಗೂ ರದ್ದು ಮಾಡಿದರೆ ಮತ್ತಷ್ಟು ಒಳ್ಳೆಯ ಕೆಲಸವಾಗುತ್ತದೆಂದು ಸಲಹೆ ನೀಡಿದರು. ಆನಂತರ ಮಾಧ್ಯಮಗಳಲ್ಲಿ ಇದೊಂದು ಸಚಿವ ಸಂಪುಟದ ನಿರ್ಧಾರ ಎಂಬಂತೆ ಪ್ರಚಾರ ಪಡೆದುಕೊಂಡಿತೆಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.ಇದನ್ನೂ ಓದಿ:ಮಂಗಳೂರು ವಿಮಾನನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಆದಿತ್ಯ ರಾವ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಬೇಡ:ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡುವುದು ಸೂಕ್ತವೆಂದು ಮಾಜಿ ಶಿಕ್ಷಣ ಸಚಿವ ತನ್ವೀರ್ ಸೇಠ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಪರೀಕ್ಷೆ ನಡೆಸುವುದು ಸುಲಭದ ಮಾತಲ್ಲ. ವಲಸೆ ಮಕ್ಕಳು, ರಾಜ್ಯದ ಗಡಿ ಭಾಗಗಳಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಆಯೋಜನೆ ಮಾಡುವುದು ಕಷ್ಟ. 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಕಷ್ಟ. ಕಂಟೈನ್ಮೆಂಟ್ ವಲಯದಲ್ಲಿ ಪರೀಕ್ಷೆ ನಡೆಸುವುದು ಕಷ್ಟ ಎಂದು ಸಿಎಂಗೆ ಮನವಿ ಮಾಡಿದ್ದಾರೆ.
ಬೆನ್ನುಮೂಳೆಯ ಆರೋಗ್ಯಕ್ಕೆ ಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
