ಬೆಂಗಳೂರು:ಈ ವರ್ಷ ದಶಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ‘ಈ ಹೊತ್ತಿಗೆ’, ಕಥಾ ಮತ್ತು ಕಾವ್ಯ ಪ್ರಶಸ್ತಿ ಘೋಷಿಸಿದೆ.
2022ರ ಅಕ್ಟೋಬರ್ ತಿಂಗಳಲ್ಲಿ, ಈ ಹೊತ್ತಿಗೆ ಟ್ರಸ್ಟ್ ವತಿಯಿಂದ, ಕಥಾ ಪ್ರಶಸ್ತಿ’ಗಾಗಿ ಹಾಗೂ ಕಾವ್ಯ ಪ್ರಶಸ್ತಿಗಾಗಿ ಅಪ್ರಕಟಿತ ಕಥಾ/ಕವನ ಸಂಕಲನಗಳನ್ನು ಆಹ್ವಾನಿಸಿದ್ದರು. ಈ ಸ್ಪರ್ಧೆಗಳ ಫಲಿತಾಂಶವನ್ನು ‘ಈ ಹೊತ್ತಿಗೆ’ ಪ್ರಕಟಿಸಿದ್ದು ಇದೇ ಮಾರ್ಚ್ ತಿಂಗಳಲ್ಲಿ ಜರುಗಲಿರುವ ಈ ಹೊತ್ತಿಗೆಯ ‘ಹೊನಲು’ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಚಾಲಕಿ ಜಯಲಕ್ಷ್ಮೀ ಪಾಟೀಲ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅರಳಸುರಳಿಯವರಾದ ಶ್ರೀ. ವಿನಾಯಕ ಅರಳಸುರಳಿ ಅವರ ಅಪ್ರಕಟಿತ ಕಥಾಸಂಕಲನ, ‘ಮರ ಹತ್ತದ ಮೀನು’, 2023ರ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ಪಡೆದುಕೊಂಡಿದೆ.
ಬೆಂಗಳೂರಿನ ಕಲಬುರ್ಗಿ ಜಿಲ್ಲೆಯ ಮಂದೇವಾಲದವರಾದ ಶ್ರೀ. ಚಾಂದ್ ಪಾಷ ಎನ್ ಎಸ್ (ಕವಿಚಂದ್ರ) ಅವರ ‘ಒದ್ದೆಗಣ್ಣಿನ ದೀಪ’ ಅಪ್ರಕಟಿತ ಕವನ ಸಂಕಲನ, ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ಪಡೆದುಕೊಂಡಿದೆ. ಎರಡೂ ಪ್ರಶಸ್ತಿಗಳು ತಲಾ ರೂ. 10,000 ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿವೆ.
ಇದೇ ಮಾರ್ಚ್ ತಿಂಗಳಲ್ಲಿ, ಬೆಂಗಳೂರಿನ ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ ನಡೆಯಲಿರುವ, ಹೊನಲು ಕಾರ್ಯಕ್ರಮದಲ್ಲಿ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
