ಬೆಂಗಳೂರು:ಮುಜರಾಯಿ ದೇವಾಲಯಗಳ ಮಾದರಿಯಲ್ಲಿ ವಕ್ಫ್ ವ್ಯಾಪ್ತಿಯ ದರ್ಗಾ ಹಾಗೂ ಮಸೀದಿಗಳಿಗೆ ಸರ್ಕಾರದ ವತಿಯಿಂದ ಇ-ಹುಂಡಿ ವ್ಯವಸ್ಥೆಯನ್ನ ಪ್ರಾರಂಭ ಮಾಡಲಾಗಿದೆ. ನೂತನ ಆ್ಯಪ್​ಗೆ ಸಚಿವ ಜಮೀರ್ ಅಹ್ಮದ್​ ಖಾನ್​ ಚಾಲನೆ ನೀಡಿದ್ದಾರೆ.
ಮುಜರಾಯಿ ಇಲಾಖೆ, ಕರ್ನಾಟಕ ಬ್ಯಾಂಕ್ ಸಹಯೋಗದಲ್ಲಿ ಜಾರಿ ಮಾಡಲಾಗಿದ್ದು ಗೂಗಲ್ ಪೇ, ಫೋನ್ ಪೇ, ಬೀಮ್, ಪೇಟಿಎಂ ಸೇರಿದಂತೆ ಯಾವುದೇ ಆ್ಯಪ್‌ನಿಂದ ಭಕ್ತರು ಕಾಣಿಕೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ:ಕಟ್ಟಿಕೊಂಡ ಹೆಂಡತಿಯನ್ನೇ ಮಾರಾಟ ಮಾಡಿದ ಪತಿ; ಧಾರ್ಮಿಕ ಮತಾಂತರ ಆರೋಪ
ಆ್ಯಪ್​ ಲಾಂಚ್​ ಬಳಿಕ ಮಾತನಾಡಿದ ಸಚಿವ ಜಮೀರ್​ ಅಹ್ಮದ್​ ಮೊದಲಿಗೆ ಬೆಂಗಳೂರಿನ ಹಜರತ್ ತವಕ್ಕಲ್ ಮಸ್ತಾನ್ ಶಾ ದರ್ಗಾದಲ್ಲಿ ಈ ಹುಂಡಿ ವ್ಯವಸ್ಥೆ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಖ್ಫ್ ವ್ಯಾಪ್ತಿಗೆ ಬರುವ 3,131 ದರ್ಗಾ, 10,398 ಮಸೀದಿ ಗಳಲ್ಲೂ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯದ ಬಂಧುಗಳು ಯಾವುದೇ ಸಮಯದಲ್ಲಿ ಫೋನ್ ಪೇ, ಗೂಗಲ್ ಪೇ ಮೂಲಕ ದೇಣಿಗೆ, ಕಾಣಿಕೆ ನೀಡುವ ವ್ಯವಸ್ಥೆಯನ್ನು ಜಾರಿ ಮಾಡಲಾಗಿದೆ ಎಂದು ಆ್ಯಪ್​ ಲಾಂಚ್​ ಮಾಡಿದ ಬಳಿಕ ಸಚಿವ ಜಮೀರ್​ ಅಹ್ಮದ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
