ಬೆಂಗಳೂರು:ಬಿಜೆಪಿ ಜತೆ ಮೈತ್ರಿಗೆ ಸೀಟು ಹಂಚಿಕೆ ಮುನ್ನವೇ ಜೆಡಿಎಸ್‌ನಲ್ಲಿ ಅಪಸ್ವರ ವ್ಯಕ್ತವಾಗಿದೆ.
ಜೆ.ಪಿ.ಭವನದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ನಾಯಕರು ಮೈತ್ರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈತ್ರಿ ಬಗ್ಗೆ ಮರು ಆಲೋಚನೆ ಮಾಡಿ ಎಂಬಷ್ಟರ ಮಟ್ಟಿಗೆ ಬೇಸರ ಹೊರಹಾಕಿದ್ದಾರೆ.
ಚುನಾವಣೆ ದಿನಾಂಕ ಘೋಷಣೆಯಾದರೂ ಸೀಟು ಹಂಚಿಕೆ ವಿಚಾರದಲ್ಲಿ ಗೊಂದಲ ಮುಂದುವರಿದಿರುವುದು ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ ಆರಂಭದಲ್ಲಿಯೇ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ಬಿಜೆಪಿ ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ.
ಏಕಪಕ್ಷೀಯವಾಗಿ ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನುಘೋಷಣೆ ಮಾಡಿದೆ. ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಮಕ್ಷಮದಲ್ಲೇ ಮುಖಂಡರು, ಚುನಾವಣಾ ಉಸ್ತುವಾರಿಗಳ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ ಎಂದು ಮುಖಂಡರ ಕಿಡಿಕಾರಿದರು.
ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸುವ ಶಕ್ತಿ ಜೆಡಿಎಸ್‌ಗೆ ಇದೆ. ಶೇ.3 ರಿಂದ ಶೇ.4 ಜೆಡಿಎಸ್ ಮತ ಬಂದರೆ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ. ಅಂಕಿ-ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದರು.
ರಾಜ್ಯಕ್ಕೆ ಪ್ರಧಾನಿ ಬಂದು ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ದೂರಿದರು.ಪ್ರಧಾನಿ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ.
ಹೈದ್ರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಡಿಮಿಡಿಗೊಂಡರು.
ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿ ಅವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಪ್ರಶ್ನೆ ಇಲ್ಲ. ಆದರೆ ಬಿಜೆಪಿಯಿಂದ ಇಂತಹ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ದೂರುಗಳ ಸುರಿಮಳೆಗರೆದರು.
ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ. ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ನೀವು ಹೇಳುತ್ತ ಬಂದಿದ್ದೀರಿ. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್ ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ ಈಗ ನೋಡಿದರೆ ಬಿಜೆಪಿ 2 ಸೀಟಿಗೆ ಬಂದು ನಿಂತಿದೆ ಎಂದು ಮುಖಂಡರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.
ಮುಖಂಡರು, ಉಸ್ತುವಾರಿಗಳಿಗೆ ಸಮಾಧಾನ ಹೇಳಿದ ದೇವೇಗೌಡರು, ಇನ್ನೊಮ್ಮೆ ಅಮಿತ್ ಶಾ, ನಡ್ಡಾ ಅವರ ಜತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದರಲ್ಲದೆ, ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಎಂದು ಹೇಳಿದರು.
>ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸ್ವಲ್ಪ ಕಾಯೋಣ.-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
