ರಾಮನಗರ:ರಾಜ್ಯದ ಅಲ್ಲಲ್ಲಿ ಮತ್ತೆ ಮತ್ತೆ ಭೂಕಂಪ ಆಗುತ್ತಿರುವ ಪ್ರಕರಣ ವರದಿಯಾಗುತ್ತಿದ್ದು, ಇಂದು ರಾಜಧಾನಿ ಬೆಂಗಳೂರಿಗೆ ಹತ್ತಿರದ ಊರಲ್ಲೇ ಭೂಮಿ ಎರಡು ಸಲ ಕಂಪನಕ್ಕೆ ಒಳಗಾಗಿದ್ದು ನಡೆದಿದೆ. ಪರಿಣಾಮವಾಗಿ ಊರಿನ ಜನರು ಆತಂಕಕ್ಕೆ ಒಳಗಾಗಿದ್ದೂ ಕಂಡುಬಂದಿದೆ.
ರಾಮನಗರದಲ್ಲಿ ಇಂದು ಸಂಜೆ 5:40 ಹಾಗೂ 7:15ರ ಸುಮಾರಿಗೆ ಎರಡು ಬಾರಿ ಕಂಪಿಸಿದ ಅನುಭವವಾಗಿದೆ. ರಾಮನಗರ ತಾಲೂಕಿನ ಬೆಜ್ಜರಹಳ್ಳಿ ಕಟ್ಟೆಯಲ್ಲಿ ಈ ಕಂಪನ ಆಗಿರುವುದು ಗಮನಕ್ಕೆ ಬಂದಿದೆ ಎಂದು ಸ್ಥಳೀಯರು ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ.
ಕಂಪನದ ಜತೆಗೆ ಶಬ್ದ ಕೂಡ ಹೊರಹೊಮ್ಮಿದ್ದು, ಶಬ್ದಕ್ಕೆ ಹೆದರಿದ ಜನರು ಮನೆಯಿಂದ ಹೊರಗೆ ಓಡಿ ಬಂದು ಆತಂಕದಲ್ಲಿರುವುದು ಕಂಡುಬಂದಿದೆ. ಆದರೆ ಈ ಭೂಕಂಪನದ ಕುರಿತು ರಿಕ್ಟರ್ ಮಾಪಕದಲ್ಲಿ ಯಾವುದೇ ಕಂಪನ ದಾಖಲಾಗಿಲ್ಲ ಎಂದು ಹೇಳಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಪುನಃ ಭೂಕಂಪ; ಜನರಲ್ಲಿ ಏರಿತು ಚಿಂತೆ, ಆತಂಕ..

ಮದ್ವೆಯಾದ 3 ತಿಂಗಳ ಬಳಿಕ ಗೊತ್ತಾಯ್ತು ಆ ವಿಷ್ಯ!; ಭಯದಿಂದ ಆತ್ಮಹತ್ಯೆಗೆ ಯತ್ನಿಸಿದ 52 ವರ್ಷದ ವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + twelve =
Remember me
