ಮಂಡ್ಯ:ಸರ್ಕಾರದ ಆದೇಶದ ಮೇರೆಗೆ 7ನೇ ಆರ್ಥಿಕ ಗಣತಿ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬುಧವಾರ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದರು.
ಬಳಿಕ ಮಾತನಾಡಿದ ಅವರು, ಗಣತಿಯಲ್ಲಿ ಮನೆ ಹಾಗೂ ವಾಣಿಜ್ಯ ಕಟ್ಟಡ, ಸಂಕೀರ್ಣಗಳಲ್ಲಿ ನಡೆಯುತ್ತಿರುವ ವ್ಯಾಪಾರ, ಉದ್ಯಮದ ಬಗ್ಗೆ ಮಾಹಿತಿಯನ್ನು ಗಣತಿದಾರರು ಕೇಳಲಿದ್ದಾರೆ. ಗಣತಿದಾರರಿಗೆ ಎಲ್ಲ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಹೈನುಗಾರಿಕೆ, ಹೊಲಿಗೆ, ಅಂಗಡಿ ಇತರ ಸಣ್ಣಪುಟ್ಟ ವ್ಯಾಪಾರ ಗಣತಿಯೊಂದಿಗೆ ವಾಣಿಜ್ಯ ಕಟ್ಟಡಗಳಲ್ಲಿನ ಉದ್ಯಮಗಳ ಬಗ್ಗೆ ಮಾಹಿತಿ ಕಲೆಹಾಕಲಿದ್ದು, ಈ ಮಾಹಿತಿ ಆಧರಿಸಿ ಮುಂದಿನ ದಿನಗಳಲ್ಲಿ ಸಂಬಂಧಿಸಿದ ಇಲಾಖೆಗಳ ಮೂಲಕ ನಿರ್ದಿಷ್ಟ ಉದ್ಯಮಗಳಿಗೆ ನೀಡಬೇಕಾದ ಸೌಲಭ್ಯ, ಸಹಕಾರಗಳ ಬಗ್ಗೆ ಯೋಜನೆ ರೂಪಿಸಲು ಸಹಕಾರಿಯಾಗಲಿದೆ. ಆದ್ದರಿಂದ ಯಾರೂ ಆತಂಕ ಪಡದೆ ಸರಿಯಾದ ಮಾಹಿತಿ ನೀಡಬೇಕೆಂದು ಸಲಹೆ ನೀಡಿದರು.ಸಭೆಯಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಧನುಷ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಶಿವಮ್ಮ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
