ಬೆಂಗಳೂರು:ಬಹುಕೋಟಿ ವಂಚನೆ ಮತ್ತು ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಮುಂಬೈ ಮೂಲದ ಕರಣ್ ಗ್ರೂಪ್ ಬಿಲ್ಡರ್ಸ್‌ ಆ್ಯಂಡ್ ಡೆವಲಪರ್ಸ್‌ ಕಂಪನಿಯ ಮಹೇಶ್ ಬಿ. ಓಝ ಬಂಧಿತ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹಲವರಿಗೆ 500 ಕೋಟಿ ರೂ. ಹೂಡಿಕೆ ಮಾಡಿಸಿಕೊಂಡು ವಂಚನೆ ಮಾಡಿದ್ದ. ಈ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಮಹೇಶ್‌ನನ್ನು ಬಂಧಿಸಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಲುವಾಗಿ 10 ದಿನಗಳ ಕಾಲ ಕಸ್ಟಡಿಗೆ ಪಡೆಯಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಕರಣ್ ಗ್ರೂಪ್ ಬಿಲ್ಡರ್ಸ್‌ ಆ್ಯಂಡ್ ಡೆವಲಪರ್ಸ್‌ ಹೆಸರಿನಲ್ಲಿ ಹಲವರಿಂದ ವಿವಿಧ ಯೋಜನೆಗೆ ಹಣ ಹೂಡಿಕೆ ಮಾಡಿಸಿಕೊಂಡಿದ್ದರು. ಹೂಡಿಕೆ ಹಣವನ್ನು ಹೂಡಿಕೆ ಮಾಡಿರುವುದಾಗಿ ಮತ್ತು ಕಮಿಷನ್ ನೀಡಿರುವುದಾಗಿ ದಾಖಲೆ ಸೃಷ್ಟಿಸಿದ್ದ. ಈ ಬಗ್ಗೆ ಕರ್ನಾಟಕದ ವಿವಿಧೆಡೆ ಹಲವು ಎಫ್​ಐಆರ್ ದಾಖಲಾಗಿದ್ದವು. ಅಂದಾಜು 526 ಕೋಟಿ ರೂ. ವಂಚನೆ ಮಾಡಿರುವುದಾಗಿ ಆತನ ವಿರುದ್ಧ ಆರೋಪ ಕೇಳಿಬಂದಿತ್ತು. ಸಿಐಡಿ ಅಧಿಕಾರಿಗಳು ಆರೋಪಿ ಮಹೇಶ್‌ನನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ತನಿಖೆ ವೇಳೆ ಆರೋಪಿ ಮಹೇಶ್ ಬೋಪಕುಮಾರ್ ಓಝ ಹೆಸರಿನಲ್ಲಿ ಬೇರೆ ಕಂಪನಿಯಲ್ಲಿ 121.5 ಕೋಟಿ ರೂ.ಅನ್ನು ಹೂಡಿಕೆ ಮಾಡಿ ಮತ್ತೊಂದು ಕಂಪನಿ ನಡೆಸುತ್ತಿರುವುದು ಬೆಳಕಿಗೆ ಬಂದಿತ್ತು. ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಆರೋಪಿ ಮಹೇಶ್‌ನನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 16 =
Remember me
