ಬೆಂಗಳೂರು:ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೋ-ಆಪ್​ರೇಟಿವ್​ ಸೊಸೈಟಿ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಆನಂದ ಬಾಲಕೃಷ್ಣ ಅಪ್ಪುಗೋಳ್​ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಅಕ್ರಮ ಹಣ ವರ್ಗಾವಣೆ ಕಾಯ್ದೆಯನ್ವಯ ಈ ಕ್ರಮಕೈಗೊಳ್ಳಲಾಗಿದೆ ಎಂದು ಸಂಸ್ಥೆ ಮಾಹಿತಿ ನೀಡಿದೆ. ಅಪ್ಪುಗೋಳ್​ಗೆ ಸೇರಿದ 31.35 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆ ಸ್ವಾಧೀನಕ್ಕೆ ಪಡೆದುಕೊಂಡಿದೆ.
ಇದನ್ನೂ ಓದಿ;ಚೀನಾ ಸಿಲ್ಕ್​ ಬ್ಯಾನ್​…? ಸ್ವಾವಲಂಬನೆಗೆ ಸೂತ್ರ…!
ಸೊಸೈಟಿಯಲ್ಲಿ ಠೇವಣಿಯಿಟ್ಟಿದ್ದ ಸಾವಿರಾರು ಜನರ 250 ಕೋಟಿ ರೂ.ಗೂ ಅಧೀಕ ಮೊತ್ತವನ್ನು ದುರ್ಬಳಕೆ ಮಾಡಿದ ಆರೋಪ ಆನಂದ್​ ಅಪ್ಪುಗೋಳ​ ಮೇಲಿದೆ. ಈತನ ವಿರುದ್ಧ ಹಲವರು ದೂರು ದಾಖಲಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.
ಠೇವಣಿದಾರರ ಹಣದಲ್ಲಿ ಹಲವು ಆಸ್ತಿ, ಐಷಾರಾಮಿ ಬಂಗಲೆಗಳನ್ನು ಆನಂದ್​ ಅಪ್ಪುಗೋಳ​ ಖರೀದಿಸಿದ್ದಾನೆ. ಇವೆಲ್ಲವನ್ನೂ ಹರಾಜು ಮಾಡಲು ಬೆಳಗಾವಿ ಜಿಲ್ಲಾಡಳಿತ ಮುಂದಾಗಿತ್ತು. ಇದೀಗ ಜಾರಿ ನಿರ್ದೇಶನಾಲಯ ಇವನ್ನು ವಶಕ್ಕೆ ಪಡೆದಿದೆ.
ಪಿಎಫ್​ ಗ್ರಾಹಕರಿಗೆ ಸಿಗಲಿದೆ ಏಳು ಲಕ್ಷ ರೂ. ವಿಮಾ ಹಣ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 1 =
Remember me
