ಬದಿಯಡ್ಕ:ಕಾಸರಗೋಡು ಜಿಲ್ಲೆಯ ಎಡನೀರು ಶಂಕರಾಚಾರ್ಯ ತೋಟಕಾಚಾರ್ಯ ಪರಂಪರೆಯ ಮಠದ ಉತ್ತರಾಧಿಕಾರಿಯಾಗಿ ನಿಯುಕ್ತಿಗೊಂಡಿರುವ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮಂಗಳವಾರ ಎಡನೀರು ಪುರ ಪ್ರವೇಶಿಸಿದರು.
ಸೋಮವಾರ ಕಾಂಚಿ ಜಗದ್ಗುರು ಪೀಠದಲ್ಲಿ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಅವರು ಜಯರಾಮ ಮಂಜತ್ತಾಯ ಅವರಿಗೆ ಸನ್ಯಾಸ ದೀಕ್ಷೆ ನೀಡಿ, ಸಚ್ಚಿದಾನಂದ ಭಾರತಿ ಎಂದು ನಾಮಕರಣ ಮಾಡಿದ್ದರು. ಸಂಜೆ ಬೆಂಗಳೂರು ತಲುಪಿ ಶಾಖಾ ಮಠದಲ್ಲಿ ತಂಗಿದ್ದ ಸಚ್ಚಿದಾನಂದ ಶ್ರೀಗಳು, ಮಂಗಳವಾರ ಮಂಗಳವಾರ ಮಧ್ಯಾಹ್ನ ಎಡನೀರಿಗೆ ಆಗಮಿಸಿದರು. ಈ ವೇಳೆ ಭವ್ಯ ಸ್ವಾಗತ ನೀಡಲಾಯಿತು. ಪುರಪ್ರವೇಶ ಬಳಿಕ ಪಟ್ಟದ ದೇವರ ಪೂಜೆ, ಎಡನೀರು ವಿಷ್ಣುಮಂಗಲ ದೇವಸ್ಥಾನ ಭೇಟಿ, ನವಗ್ರಹ ಶಾಂತಿ ಹವನದ ಪೂರ್ಣಾಹುತಿಯಲ್ಲಿ ಭಾಗವಹಿಸಿ ಮಠಕ್ಕೆ ಹಿಂತಿರುಗಿದರು.
ತಂತ್ರಿವರ್ಯರು, ವೈದಿಕರು, ಸಂಸದ ರಾಜಮೋಹನ ಉಣ್ಣಿತ್ತಾನ್, ಉದುಮ ಶಾಸಕ ಕೆ.ಕುಂಞಿ ರಾಮನ್, ಮುರಳೀ ತಂತ್ರಿ, ರವೀಶ ತಂತ್ರಿ ಕುಂಟಾರು, ಶ್ರೀಶದೇವ ಪೂಜಿತ್ತಾಯ, ಪೀಠಾರೋಹಣ ಸಮಿತಿ ಕಾರ್ಯಾಧ್ಯಕ್ಷ ಕೆ.ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.
ಇಂದು ಪೀಠಾರೋಹಣ:ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ಪೀಠಾರೋಹಣ ವಿಧಿವಿಧಾನಗಳು ಅ.28ರಂದು ನಡೆಯಲಿವೆ. ಬೆಳಗ್ಗೆ ಗಣಪತಿ ಹವನ, ಚಂಡಿಕಾ ಹೋಮ, ಪಟ್ಟದ ದೇವರಿಗೆ ಪೂಜೆ, ಅಭಿಷೇಕ ಪೂಜೆ, 10ರ ಬಳಿಕ ಪೀಠಾರೋಹಣ, ಮಧ್ಯಾಹ್ನ ಮಹಾಪೂಜೆ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − four =
Remember me
