ಮಳೆಗಾಲದಲ್ಲಿ ಹಲವು ಕಾಯಿಲೆಗಳು ಉಲ್ಬಣವಾಗುತ್ತಿದ್ದು, ಆರೋಗ್ಯ ವ್ಯವಸ್ಥೆ ಸನ್ನದ್ಧವಾಗಿ ಇರಬೇಕಾದ ಕಾಲವಿದು. ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಹಾವಳಿ ಎಬ್ಬಿಸಿರುವ ಜಿಕಾ ವೈರಾಣು ಈಗ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ಬೆಂಗಳೂರೊಂದರಲ್ಲೇ ಆರು ಪ್ರಕರಣಗಳು ವರದಿಯಾಗಿವೆ.
ಒಂದೆಡೆ ಡೆಂಘ ಮತ್ತು ಚಿಕುನ್​ಗುನ್ಯಾ ಹಾವಳಿ ವ್ಯಾಪಕವಾಗಿರುವ ಬೆನ್ನಲ್ಲೇ ಜಿಕಾ ವೈರಸ್ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವಿಕೆ ಮತ್ತು ವಿವಿಧ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಜಿಕಾ ವೈರಾಣು ಬರದಂತೆ ತಡೆಯಬೇಕು ಎಂದು ಆರೋಗ್ಯ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಈ ರೋಗಕ್ಕೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ ಎಂದೂ ಆರೋಗ್ಯ ಇಲಾಖೆ ಹೇಳಿದೆ.
ಡೆಂಘ ಮತ್ತು ಚಿಕುನ್​ಗುನ್ಯಾ ಹರಡುವ ಈಡಿಸ್ ಜಾತಿಯ ಸೊಳ್ಳೆಗಳೇ ಜಿಕಾ ಸೋಂಕು ಹರಡುತ್ತವೆ. ಹಾಗಾಗಿ, ಸ್ವಚ್ಛತೆ ಕಾಯ್ದುಕೊಳ್ಳಲು ಆದ್ಯತೆ ನೀಡುವುದು ಮುಖ್ಯ. ಈ ವಿಷಯದಲ್ಲಿ ಸರ್ಕಾರ ಮಾತ್ರವಲ್ಲದೆ ಜನರ ಪಾತ್ರವೂ ಅಷ್ಟೇ ಪ್ರಮುಖವಾಗಿದೆ. ಮನೆಯ ಒಳಾಂಗಣ ಮತ್ತು ಹೊರಾಂಗಣವನ್ನು ಸ್ವಚ್ಛಚಾಗಿ ಇಡುವುದು, ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು, ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಜತೆಗೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದು, ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳ ಉಪಯೋಗದ ಮೂಲಕ ಸ್ವಯಂ ರಕ್ಷಣಾ ವಿಧಾನ ಅನುಸರಿಸುವುದರಿಂದ ವೈರಾಣು ಹರಡುವಿಕೆ ತಡೆಯಲು ಸಾಧ್ಯವಿದೆ. ಮುಖ್ಯವಾಗಿ, ಜ್ವರ, ತಲೆನೋವು, ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಾಣಿಸಿಕೊಂಡಲ್ಲಿ ಸ್ವಯಂ ಚಿಕಿತ್ಸೆಗೆ ಮುಂದಾಗದೆ ತಕ್ಷಣ ವೈದ್ಯರನ್ನು ಕಂಡು, ಚಿಕಿತ್ಸೆ ಪಡೆಯಬೇಕು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಬಳಸಬೇಕು.
ಮಹಾರಾಷ್ಟ್ರದಲ್ಲೂ 8 ಜನರಲ್ಲಿ ಜಿಕಾ ವೈರಾಣು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಕೇಂದ್ರದ ಆರೋಗ್ಯ ಸಚಿವಾಲಯವು ದೇಶಾದ್ಯಂತ ಈ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸುವ ಅಗತ್ಯವಿದೆ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ವಸತಿ ಪ್ರದೇಶಗಳು, ಕೆಲಸದ ಸ್ಥಳಗಳು, ಶಾಲೆ-ಕಾಲೇಜುಗಳು, ನಿರ್ಮಾಣ ಸ್ಥಳಗಳು, ಸಂಸ್ಥೆಗಳ ಆವರಣಗಳಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸುವಂತೆಯೂ ಅದು ಹೇಳಿದೆ.
ಜನರು ಈಗಾಗಲೇ ಡೆಂಘ ಮತ್ತು ಚಿಕುನ್​ಗುನ್ಯಾದ ಹಾವಳಿಗೆ ತತ್ತರಿಸಿದ್ದಾರೆ. ಹಾಗಾಗಿ, ಜಿಕಾ ವೈರಸ್ ಪ್ರಸರಣವನ್ನು ತಡೆಯಲು ರಾಜ್ಯ ಸರ್ಕಾರ ಜನಜಾಗೃತಿ ಮೂಡಿಸುವುದರ ಜತೆಗೆ, ಅಗತ್ಯವಿರುವ ಎಲ್ಲ ವೈದ್ಯಕೀಯ ಚಿಕಿತ್ಸೆಗಳ ವ್ಯವಸ್ಥೆ ಮಾಡಬೇಕು. ವೈರಸ್ ಹರಡದಂತೆ ಕ್ರಮ ಕೈಗೊಳ್ಳಬೇಕು. ಜನರು ಭಯಭೀತರಾಗದೆ ಸೂಕ್ತ ಸ್ವಯಂರಕ್ಷಣಾ ಕ್ರಮಗಳನ್ನು ಅಳವಡಿಸಿಕೊಂಡಲ್ಲಿ ಈ ಅಪಾಯದಿಂದ ಪಾರಾಗಬಹುದು. ಒಟ್ಟಾರೆ, ಆರೋಗ್ಯ ವಲಯ ಹೊಸ ಸವಾಲುಗಳನ್ನು ಎದುರಿಸುತ್ತಿದ್ದು, ಇವುಗಳ ವಿರುದ್ಧ ಸಂಘಟಿತ ಹೋರಾಟ ಈಗಿನ ಅಗತ್ಯವಾಗಿದೆ.
ಕುಂದಾಪ್ರ ಕನ್ನಡ ಹಬ್ಬ| ಮಾತೃ ಭಾಷೆಯ ಮೇಲೆ ಅಭಿಮಾನವಿರಲಿ: ಮಾಜಿ ಸಚಿವ ಜಯಪ್ರಕಾಶ ಹೆಗ್ಡೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten − 4 =
Remember me
