ಕೇಂದ್ರದ ವಿವಿಧ ಸಚಿವಾಲಯಗಳ ಜಂಟಿ ಕಾರ್ಯದರ್ಶಿ, ಉಪ ಕಾರ್ಯದರ್ಶಿ, ನಿರ್ದೇಶಕ ಮುಂತಾದ ಮಹತ್ವದ ಹುದ್ದೆಗಳಿಗೆ ಆಯಾ ಕ್ಷೇತ್ರಗಳ ತಜ್ಞರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಮುಂದಾಗಿರುವುದು ಈಗ ವಿವಾದದ ವಿಷಯವಾಗಿ ಪರಿಣಮಿಸಿದೆ. ಕಾಂಗ್ರೆಸ್ ನಾಯಕರು ಈ ಕ್ರಮವನ್ನು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಈವರೆಗೆ ಇಂತಹ ಹುದ್ದೆಗಳಿಗೆ ಐಎಎಸ್ ಸ್ತರದ ಅಧಿಕಾರಿಗಳನ್ನೇ ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಕೇಂದ್ರ ಲೋಕಸೇವಾ ಆಯೋಗದ ಮೂಲಕ ನಡೆಯುವ ಐಎಎಸ್ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀತಿಯನ್ನು ಪಾಲಿಸಲಾಗುತ್ತದೆ.
ಹೀಗೆ ನೇರವಾಗಿ ಅಥವಾ ಪರ್ಯಾಯವಾಗಿ ನೇಮಕ (ಲ್ಯಾಟರಲ್ ಎಂಟ್ರಿ) ಮಾಡಿಕೊಂಡರೆ ಮೀಸಲಾತಿಯನ್ನು ಪಾಲಿ ಸಲು ಸಾಧ್ಯವಾಗುವುದಿಲ್ಲ ಎಂಬುದು ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮುಂತಾದವುಗಳ ನಾಯಕರ ಅಭಿಮತವಾಗಿದೆ.
ಆದರೆ ಈ ಪರಿ ಕಲ್ಪನೆ ಆರಂಭವಾಗಿದ್ದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ. ಇದನ್ನು ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಅಧ್ಯಕ್ಷತೆಯಲ್ಲಿ 2005ರಲ್ಲಿ ಸ್ಥಾಪಿಸಲಾದ ಎರಡನೇ ಆಡಳಿತ ಸುಧಾರಣೆ ಆಯೋಗ ಕೂಡ ಬಲವಾಗಿ ಅನುಮೋದಿಸಿತ್ತು ಎಂಬ ವಿಷಯವನ್ನು ಬಿಜೆಪಿ ನಾಯಕರು ಈಗ ಬಹಿರಂಗಪಡಿಸಿದ್ದಾರೆ. ಐಎಎಸ್ ಅಧಿಕಾರಿಗಳು ದೇಶದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಅವರೆಲ್ಲರೂ ಸಾಕಷ್ಟು ಆಯಕಟ್ಟಿನ ಹುದ್ದೆಗಳನ್ನು ಈಗಾಗಲೇ ಅಲಂಕರಿಸಿದ್ದಾರೆ. ಆಯ್ದ ಕೆಲವೇ ಕೆಲವು ಮಹತ್ವದ ಹುದ್ದೆಗಳಿಗೆ ಖಾಸಗಿ ತಜ್ಞರನ್ನು ನೇಮಕ ಮಾಡಿಕೊಳ್ಳುವುದರಿಂದ ಇಡೀ ಅಧಿಕಾರಶಾಹಿಯ ನೇಮಕಾತಿ ಪ್ರಕ್ರಿಯೆಯನ್ನೇ ಖಾಸಗೀಕರಣ ಮಾಡಿದಂತೆ ಆಗುವುದಿಲ್ಲ ಎಂಬುದನ್ನು ವಿರೋಧ ಪಕ್ಷಗಳು ಗಮನಿಸಬೇಕು. ಈ ರೀತಿಯ ಕೆಲವು ನೇಮಕಾತಿಗಳ ಮೂಲಕ ಇಡೀ ಮೀಸಲಾತಿಯ ಆಶಯಕ್ಕೇ ಧಕ್ಕೆ ತರಲಾಗುತ್ತಿದೆ ಎಂದು ಅರ್ಥೈಸುವುದು ಕೂಡ ಅವಸರದ ಪ್ರತಿಕ್ರಿಯೆ ಎನಿಸಿಕೊಳ್ಳಬಹುದು.
ಈಗಾಗಲೇ ಕೆಲವು ರಾಜ್ಯ ಸರ್ಕಾರಗಳು ಕೂಡ ಹಲವಾರು ಉನ್ನತ ಹುದ್ದೆಗಳಿಗೆ ವಿಷಯತಜ್ಞರನ್ನು ನೇಮಕ ಮಾಡಿಕೊಂಡಿರುವ ಉದಾಹರಣೆಗಳು ನಮ್ಮ ಮುಂದಿವೆ. ಕೇಂದ್ರ ಸರ್ಕಾರ ಕೂಡ ಇದೇ ರೀತಿಯ ಒಂದು ಪ್ರಯೋಗಕ್ಕೆ ಮುಂದಾಗಿದೆ. ಈ ವಿಷಯದಲ್ಲಿ ಆರೋಪ-ಪ್ರತ್ಯಾರೋಪಗಳ ಅವಶ್ಯಕತೆ ಇಲ್ಲ. ಈ ಪ್ರಯೋಗ ಯಶಸ್ವಿಯಾಗುವುದೇ ಎಂಬುದನ್ನು ಕಾಯ್ದು ನೋಡಿ, ಪರ-ವಿರೋಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸೂಕ್ತವಾಗುತ್ತದೆ.
ಮುಡಾ ಹಗರಣ: ಹೈಕೋರ್ಟ್​ ಆದೇಶದ ಬಳಿಕ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
