ಪ್ರಧಾನಿ ನರೇಂದ್ರ ಮೋದಿ 78ನೇ ಸ್ವಾತಂತ್ರೊ್ಯೕತ್ಸವದಲ್ಲಿ ದೆಹಲಿಯ ಕೆಂಪುಕೋಟೆಯಿಂದ ದೇಶವನ್ನು ಉದ್ದೇಶಿಸಿ ಮಾತನಾಡುತ್ತ ಹಲವು ಪ್ರಮುಖ ಸಂಗತಿಗಳನ್ನು ಪ್ರಸ್ತಾಪಿಸಿದ್ದಾರೆ. ಮಾತ್ರವಲ್ಲ, ದೇಶದಲ್ಲಾಗಬೇಕಿರುವ ಪ್ರಮುಖ ಬದಲಾವಣೆಗಳ ಬಗ್ಗೆಯೂ ಮಾತನಾಡುತ್ತ, ಭಾರತದ ಸಾಮೂಹಿಕ ಶಕ್ತಿ ಮಹತ್ವದ ಸಾಧನೆ ಮಾಡಬಹುದು ಎಂದಿದ್ದಾರೆ. ಸಮಾನ ನಾಗರಿಕ ಸಂಹಿತೆ ಮತ್ತು ‘ಒಂದು ದೇಶ ಒಂದು ಚುನಾವಣೆ’ಯಂಥ ಪ್ರಮುಖ ವಿಷಯಗಳು ನಮ್ಮಲ್ಲಿ ರಾಜಕೀಯ ವಿರೋಧದಿಂದ ನನೆಗುದಿಗೆ ಬಿದ್ದಿರುವುದು ವಿಷಾದಕರ. ಯಾವುದೇ ವಿಷಯವನ್ನು ರಾಜಕೀಯ ಲಾಭದ ದೃಷ್ಟಿಯಿಂದ ನೋಡುವುದು ಮತ್ತು ವಿರೋಧಕ್ಕಾಗಿ ವಿರೋಧ ಎಂಬ ನೀತಿ ತಳೆಯುವುದರಿಂದ ದೇಶದ ಹಿತಕ್ಕೆ ಮಾರಕವೇ ಸರಿ. ಭಾರತ ಇಂದು ಅಭಿವೃದ್ಧಿಯ ಪ್ರಮುಖ ಶಕ್ತಿಯಾಗಿ ಗುರುತಿಸಿಕೊಳ್ಳುವರೆಗಿನ ಪಯಣದಲ್ಲಿ ಸಾಕಷ್ಟು ಹಾದಿ ಕ್ರಮಿಸಿದೆ. ಕಳೆದ 75 ವರ್ಷಗಳಲ್ಲಿ ಈ ಹಿಂದಿನ ಸರ್ಕಾರಗಳು ಕೂಡ ಕಠಿಣ, ದಿಟ್ಟ ನಿರ್ಧಾರಗಳನ್ನು ತಳೆದಿವೆ ಎಂಬುದು ಗಮನಾರ್ಹ. ಹೀಗಿರುವಾಗ, ಇತ್ತೀಚಿನ ವರ್ಷಗಳಲ್ಲಿ ಸರ್ಕಾರದ ಎಲ್ಲ ನೀತಿಗಳಿಗೂ ವಿರೋಧ ಹೆಚ್ಚುತ್ತಿರುವುದು ಕಳವಳಕಾರಿ. ಪ್ರಮುಖ, ಗಂಭೀರ ವಿಷಯಗಳ ಬಗ್ಗೆ ಭಿನ್ನಾಭಿಪ್ರಾಯ ಸಹಜವೇ. ಆದರೆ, ಅದನ್ನು ಬಗೆಹರಿಸಲು ಪೂರ್ವಾಗ್ರಹಗಳನ್ನು ತೊರೆದು, ಮುಕ್ತ ಮನಸ್ಸಿನಿಂದ ಮಾತುಕತೆ ನಡೆಸುವುದು ಅಗತ್ಯ. ರಾಷ್ಟ್ರಹಿತದ ವಿಷಯ ಬಂದಾಗ ರಾಜಕೀಯ ಲಾಭ ಅಥವಾ ಇತರ ಹಿತಾಸಕ್ತಿಗಳನ್ನು ಬದಿಗೊತ್ತಬೇಕು.
ಜಮ್ಮು-ಕಾಶ್ಮೀರಕ್ಕೆ ವಿಧಿ 370ರ ಮೂಲಕ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ವಿಷಯದಲ್ಲೂ ಪ್ರತಿಪಕ್ಷಗಳು ಇದೇ ರೀತಿ ಭಯ ಸೃಷ್ಟಿಸಿದ್ದವು. ‘ವಿಶೇಷ ಸ್ಥಾನಮಾನ ರದ್ದುಗೊಳಿಸಿದರೆ ದೇಶದಲ್ಲಿ ಬೆಂಕಿ ಬೀಳುತ್ತದೆ’ ಎಂದ ಕಾಶ್ಮೀರದ ಮಾಜಿ ಮುಖ್ಯಮಂತ್ರಿಯೊಬ್ಬರು ಹೇಳಿದ್ದರು. ಆದರೆ, ಕೇಂದ್ರ ಸರ್ಕಾರ ಕಠಿಣ ನಿರ್ಧಾರ ತಳೆದ ಪರಿಣಾಮ ಇಂದು ಕಾಶ್ಮೀರದಲ್ಲಿನ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ಹಾಗಾಗಿ, ಯಾವುದೇ ನಿರ್ಧಾರದ ಅನುಷ್ಠಾನದ ಮುನ್ನವೇ ಅದರ ಬಗ್ಗೆ ಪೂರ್ವಾಗ್ರಹಗಳನ್ನು ಹೊಂದುವುದು ಅಥವಾ ಭೀತಿ ಸೃಷ್ಟಿಸುವುದು ಸರಿಯಲ್ಲ. ‘ದೇಶದಲ್ಲಿ ಸದ್ಯ ಜಾರಿಯಲ್ಲಿರುವ ನಾಗರಿಕ ಸಂಹಿತೆ ಕೋಮುಗಳನ್ನು ಪ್ರಚೋದಿಸುವಂತಿದ್ದು, ದೇಶಕ್ಕೆ ಜಾತ್ಯತೀತವಾಗಿರುವ ಏಕರೂಪ ನಾಗರಿಕ ಸಂಹಿತೆ ಅತ್ಯಗತ್ಯ ಹಾಗೂ ಅನಿವಾರ್ಯ’ ಎಂದು ಪ್ರಧಾನಿ ಪ್ರತಿಪಾದಿಸಿದ್ದಾರೆ. ‘ಒಂದು ದೇಶ ಒಂದು ಚುನಾವಣೆಯ’ ಅಗತ್ಯವನ್ನೂ ಸಾರಿದ್ದಾರೆ. ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ 75 ಸಾವಿರ ವೈದ್ಯಕೀಯ ಸೀಟುಗಳನ್ನು ಸೃಷ್ಟಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿರುವುದು ಸ್ವಾಗತಾರ್ಹ. ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ.
‘ಭಾರತದಲ್ಲಿ 10 ಕೋಟಿಗಿಂತ ಹೆಚ್ಚು ಮಹಿಳೆಯರು ಸ್ವ-ಸಹಾಯ ಗುಂಪುಗಳಿಗೆ ಸೇರಿದ್ದಾರೆ. ಆ ಮೂಲಕ ತಮ್ಮ ಕುಟುಂಬದ ಬಗೆಗಿನ ನಿರ್ಧಾರ ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ’ ಎಂದು ಸ್ವಾವಲಂಬನೆಯ ಶಕ್ತಿಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ‘ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರೂ. ಪಡೆಯುತ್ತಿರುವ ಫಲಾನುಭವಿಗಳನ್ನು ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘಗಳಾಗಿ ಸಂಘಟಿಸಿ ಅವರಿಗೆ ವಿವಿಧ ಹಣಕಾಸು ಸಂಸ್ಥೆಗಳಿಂದ ಆರ್ಥಿಕ ನೆರವು ಒದಗಿಸಲಾಗುವುದು, ಈ ಮೂಲಕ ವರಮಾನ ತರುವ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಲಾಗುವುದು’ ಎಂದು ಸಿಎಂ ಸಿದ್ದರಾಮಯ್ಯ ಸ್ವಾತಂತ್ರೊ್ಯೕತ್ಸವ ಭಾಷಣ ದಲ್ಲಿ ಹೇಳಿದ್ದಾರೆ. ಸ್ತ್ರೀಸಬಲೀಕರಣ ಹಾಗೂ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ, ಇವು ಉತ್ತಮ ಕ್ರಮಗಳಾಗಿದ್ದು, ಸಮರ್ಪಕವಾಗಿ ಅನುಷ್ಠಾನಕ್ಕೆ ಬರುವುದು ಮುಖ್ಯ.
ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮವಹಿಸಲಿ: ಸಚಿವ ದಿನೇಶ್ ಗುಂಡೂರಾವ್ ಒತ್ತಾಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
